Tuesday, 1 June 2021

BIG NEWS: ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಪ್ರಧಾನಿಯಾಗಿ 25 ವರ್ಷ, ಪಕ್ಷದಿಂದ ಸಾಧನೆಗಳ ಸ್ಮರಣ ಅಭಿಯಾನ


 ಬೆಂಗಳೂರು: ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿ ಜೂನ್ 1ಕ್ಕೆ 25 ವರ್ಷಗಳಾಗಿವೆ.

ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದಿಂದ ದೇವೇಗೌಡರ ಸಾಧನೆಗಳ ಸ್ಮರಣ ಅಭಿಯಾನ ಹಮ್ಮಿಕೊಳ್ಳಲಾಗಿದೆ. ದೇವೇಗೌಡರ ರಾಜಕೀಯ ಜೀವನ, ಸಾಧನೆ ,ದೇಶಕ್ಕೆ ಮತ್ತು ರಾಜ್ಯಕ್ಕೆ ಅವರು ನೀಡಿದ ಕೊಡುಗೆಗಳ ಕುರಿತು ಹಿರಿಯ ರಾಜಕಾರಣಿಗಳು, ಹಿರಿಯ ಪತ್ರಕರ್ತರು ಅಭಿಪ್ರಾಯ ವ್ಯಕ್ತಪಡಿಸಲಿದ್ದಾರೆ.

ಜೂನ್ 1 ರಿಂದ 25 ರವರೆಗೆ ದೇವೇಗೌಡರ ಸ್ಮರಣ ಅಭಿಯಾನ ಕೈಗೊಳ್ಳಲಾಗಿದೆ. ಪ್ರಮುಖರು ದೇವೇಗೌಡರ ಕುರಿತಾಗಿ ವಿಡಿಯೋ ಮೂಲಕ ಮಾತನಾಡಲಿದ್ದು, ಪ್ರತಿದಿನ ಸಂಜೆ 5 ಗಂಟೆಗೆ ಜೆಡಿಎಸ್ ಪಕ್ಷದ ಅಧಿಕೃತ ಫೇಸ್ಬುಕ್ ಪೇಜ್ ಮತ್ತು ಟ್ವಿಟರ್ ಪೇಜ್ ಗಳಲ್ಲಿ ವಿಡಿಯೋ ಪ್ರಸಾರ ಮಾಡಲಾಗುವುದು.

No comments:

Post a Comment

Featured post

148 ವರ್ಷಗಳ ನಂತರ, 10 ಜೂನ್ 2021 ರ ಮೊದಲ ಸೂರ್ಯಗ್ರಹಣ!!,

ಸಮಗ್ರ ಸುದ್ದಿ ಸ್ಪೇಷಲ್ : ಅಪರೂಪದ ಖಗೋಳ ವಿದ್ಯಾಮಾನದ ಕುರಿತಾಗಿ ವಿಶೇಷ ಲೇಖನ, ನವೀನ್.ಪಿ.ಆಚಾರ್ , ಸಹ ಕಾರ್ಯದರ್ಶಿ , ಚಿತ್ರದುರ್ಗ ವಿಜ್ಞಾನ ಕೇಂದ್ರ.  ಗ್ರಹಣ ಎಂದಾಕ...