ಸೋಮವಾರದ ವರದಿಯಲ್ಲಿ 731 ಜನರಿಗೆ ಸೋಂಕು ದೃಢಪಟ್ಟಿದ್ದು, ಒಬ್ಬರು ಮೃತರಾಗಿದ್ದಾರೆ. , ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 29,350ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 299, ಚಳ್ಳಕೆರೆ 117, ಹಿರಿಯೂರು 39, ಹೊಳಲ್ಕೆರೆ 109, ಹೊಸದುರ್ಗ 115, ಮೊಳಕಾಲ್ಮುರು ತಾಲ್ಲೂಕಿನ 52 ಪ್ರಕರಣಗಳು ದೃಢಪಟ್ಟಿವೆ.
ಸೋಮವಾರ ಒಟ್ಟು 2060 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ಇದುವರೆಗೆ ಒಟ್ಟು 144 ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 22,270 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 6,936 ಸಕ್ರಿಯ ಪ್ರಕರಣಗಳು ಇವೆ. ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಸೋಮವಾರ 644 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.ಈವರೆಗೆ 4,83,186 ಜನರ ಮಾದರಿ ಸಂಗ್ರಹಿಸಲಾಗಿದ್ದು, 4,52,986 ಜನರ ವರದಿ ನೆಗೆಟೀವ್ ಬಂದಿದೆ. ಉಳಿದ 42 ಜನರ ವರದಿ ಬರುವುದು ಬಾಕಿ ಇದೆ.ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 2,84,645 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ. 808 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ, ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಂಗನಾಥ್ ತಿಳಿಸಿದ್ದಾರೆ.
Comments
Post a Comment