ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುವವರೆಗೆ ಲಾಕ್‌ಡೌನ್ ಮುಂದುವರಿಸುವಂತೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.
ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ.5ಕ್ಕಿಂತ ಮತ್ತು ಮರಣ ಪ್ರಮಾಣ ಶೇ.1ಕ್ಕಿಂತ ಕಡಿಮೆ ಬರುವವರೆಗೆ ರಾಜ್ಯದಲ್ಲಿ ಲಾಕ್‌ಡೌನ್ ಮುಂದುವರಿಸಬೇಕು. ಈಗಿರುವ ಲಾಕ್‌ಡೌನ್ ನಲ್ಲಿನ ಕಠಿಣ ನಿಯಮವನ್ನೇ ಮುಂದುವರಿಸಬೇಕು ಎಂದು ತನ್ನ ವರದಿಯಲ್ಲಿ ತಿಳಿಸಿದೆ.
ಸೋಮವಾರ ಕೋವಿಡ್ ಪಾಸಿಟಿವ್ ಪ್ರಮಾಣ ಶೇ.13.57ರಷ್ಟು ಹಾಗೂ ಮರಣ ಪ್ರಮಾಣ ಶೇ.2.47 ಇದೆ. ಪ್ರತಿದಿನ ಈ ಪ್ರಮಾಣ ಇಳಿಕೆ ಕಾಣುತ್ತಿದೆ.ಆದರೂ ಈ ಪ್ರಮಾಣ ಕಡಿಮೆ ಆಗುವವರೆಗೂ ಕಠಿಣ ಲಾಕ್‌ಡೌನ್ ಮುಂದುವರಿಸಬೇಕು. ರಾಜ್ಯದಲ್ಲಿ ಸೋಂಕಿನ ಪ್ರಮಾಣ 5 ಸಾವಿರಕ್ಕೆ ಇಳಿಯುವರೆಗೆ ಕಠಿಣ ನಿಯಮಗಳನ್ನು ಮುಂದುವರಿಸಬೇಕು ಎಂದು ಸಲಹೆ ನೀಡಿದೆ.

No comments:
Post a Comment