ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 3382 ಜನರಿಗೆ ಕೊರೋನಾ ಪಾಸಿಟಿವ್ ಬಂದಿದೆ. 111 ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 76,505 ಸಕ್ರಿಯ ಪ್ರಕರಣಗಳು ಇವೆ. ರಾಜ್ಯದಲ್ಲಿ ಇಂದು 12,763 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು , ಇದುವರೆಗೆ 27,32,242 ಜನ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 35,040 ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 28,43,810 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 813 ಜನರಿಗೆ ಸೋಂಕು ತಗುಲಿದ್ದು , 11 ಮಂದಿ ಸಾವನ್ನಪ್ಪಿದ್ದಾರೆ. 9549 ಜನರು ಬಿಡುಗಡೆಯಾಗಿದ್ದು , 43,698 ಸಕ್ರಿಯ ಪ್ರಕರಣಗಳು ಇವೆ.