Thursday 24 June 2021

2021 ರ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಮುಡಿಗೇರಿಸಿಕೊಂಡ, ನ್ಯೂಜಿಲ್ಯಾಂಡ್.

 


ನವದೆಹಲಿ: ದಿ ರೋಸ್ ಬೌಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ನ್ಯೂಜಿಲೆಂಡ್ ತಂಡವು ಭಾರತದ ವಿರುದ್ಧ ಫೈನಲ್ ಪಂದ್ಯದಲ್ಲಿ ಎಂಟು ವಿಕೆಟ್ ಗಳ ಅಂತರದಿಂದ ಗೆಲುವನ್ನು ಸಾಧಿಸಿದೆ.ಆ ಮೂಲಕ ಉದ್ಘಾಟನಾ ಆವೃತ್ತಿಯ ಟೆಸ್ಟ್ ಚಾಂಪಿಯನ್ಶಿಪ್ ನ್ನು ತನ್ನದಾಗಿಸಿಕೊಂಡಿದೆ.

ಮೊದಲು ಟಾಸ್ ಗೆದ್ದು ಕ್ಷೇತ್ರ ರಕ್ಷಣೆಯನ್ನು ಆಯ್ದುಕೊಂಡ ನ್ಯೂಜಿಲೆಂಡ್ ತಂಡವು ಭಾರತವನ್ನು ಮೊದಲ ಇನಿಂಗ್ಸ್ ನಲ್ಲಿ ಕೇವಲ 217 ರನ್ ಗಳಿಗೆ ಕಟ್ಟಿ ಹಾಕಲು ಯಶಸ್ವಿಯಾಯಿತು. ಇದಕ್ಕೆ ಪ್ರತಿಯಾಗಿ ನ್ಯೂಜಿಲೆಂಡ್ ತಂಡವು 249 ರನ್ ಗಳ ಮೂಲಕ ಅಲ್ಪ ರನ್ ಗಳ ಮುನ್ನಡೆಯನ್ನು ಸಾಧಿಸಿತು.


ಇನ್ನೊಂದೆಡೆಗೆ ಎರಡೇ ಇನಿಂಗ್ಸ್ ಬ್ಯಾಟಿಂಗ್ ಆರಂಭಿಸಿದ ಭಾರತ ತಂಡವು ತನ್ನ ಎಂದಿನ ಬ್ಯಾಟಿಂಗ್ ವೈಫಲ್ಯವನ್ನು ಇಲ್ಲಿಯೂ ಮುಂದುವರೆಸಿತು. ಭಾರತದ ಪರವಾಗಿ ರಿಶಬ್ ಪಂತ್ 41 ರನ್ ಗಳನ್ನು ಗಳಿಸಿದ್ದೆ ವೈಯಕ್ತಿಕ ಗರಿಷ್ಟ ಮೊತ್ತವಾಗಿತ್ತು, ಉಳಿದವರು ಯಾರೂ ಕೂಡ ನಿರೀಕ್ಷಿತ ಪ್ರಮಾಣದಲ್ಲಿ ಪ್ರದರ್ಶನ ನೀಡುವಲ್ಲಿ ವಿಫಲರಾದರು. ಇದರಿಂದಾಗಿ ಭಾರತ ತಂಡವು ಎರಡನೇ ಇನಿಂಗ್ಸ್ ನಲ್ಲಿ ಕೇವಲ 170 ರನ್ ಗಳಿಗೆ ಆಲೌಟ್ ಆಯಿತು.

ಆ ಮೂಲಕ ನ್ಯೂಜಿಲೆಂಡ್ ತಂಡಕ್ಕೆ 139 ರನ್ ಗಳ ಗೆಲುವಿನ ಗುರಿಯನ್ನು ನೀಡಿತು.ಈ ಗುರಿಯನ್ನು ಬೆನ್ನತ್ತಿದ ನ್ಯೂಜಿಲೆಂಡ್ ತಂಡವು ಎರಡು ವಿಕೆಟ್ ಕಳೆದುಕೊಂಡು 140 ರನ್ ಗಳಿಸುವ ಮೂಲಕ ಉದ್ಘಾಟನಾ ಆವೃತ್ತಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ನ್ನು ತನ್ನದಾಗಿಸಿಕೊಂಡಿತು.ನ್ಯೂಜಿಲೆಂಡ್ ಪರವಾಗಿ ಜೆಮಿಸನ್ ಎರಡು ಇನಿಂಗ್ಸ್ ಗಳಿಂದ ಒಟ್ಟು ಏಳು ವಿಕೆಟ್ ಗಳನ್ನು ಪಡೆಯುವ ಮೂಲಕ ಭಾರತ ತಂಡದ ಬ್ಯಾಟಿಂಗ್ ಬೆನ್ನೆಲುಬನ್ನು ಮುರಿದರು.

 


No comments:

Post a Comment