ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 16,068 ಜನರಿಗೆ ಹೊಸದಾಗಿ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಹೌದು. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 16,068 ಜನರಿಗೆ ಹೊಸದಾಗಿ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2669514 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 364 ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 30895 ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಇವತ್ತು 22316 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 2358412 ಜನ ಗುಣಮುಖರಾಗಿದ್ದಾರೆ. 280186 ಸಕ್ರಿಯ ಪ್ರಕರಣಗಳು ಇವೆ.
ಬೆಂಗಳೂರಿನಲ್ಲಿ 3221 ಜನರಿಗೆ ಸೋಂಕು ತಗಲಿದ್ದು, 206 ಸೋಂಕಿತರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ 131179 ಸಕ್ರಿಯ ಪ್ರಕರಣಗಳಿದ್ದು, ಇಂದು 6220 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೆ 1031834 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.



No comments:
Post a Comment