ಈ ಕುರಿತಂತೆ ಆರೋಗ್ಯ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್
ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ
ಹೊಸದಾಗಿ ಬೆಂಗಳೂರು ನಗರದಲ್ಲಿ 933 ಸೇರಿದಂತೆ ರಾಜ್ಯಾಧ್ಯಂತ 4517
ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಇದರಿಂದಾಗಿ ಸೋಂಕಿತರ
ಸಂಖ್ಯೆ 2806453ಗೆ ಏರಿಕೆಯಾಗಿದೆ. ಇವರಲ್ಲಿ ಇಂದು 8456 ಜನರು ಸೇರಿದಂತೆ ಇದುವರೆಗೆ 2645735 ಸೋಂಕಿತರು ಗುಣಮುಖರಾಗಿ
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ 126813 ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿದೆ.
ಇಂದು ಬೆಳಗಾವಿ ಹಾಗೂ ಬೆಂಗಳೂರು ನಗರದಲ್ಲಿ ತಲಾ 12 ಜನರು, ಮೈಸೂರಿನಲ್ಲಿ 17 ಜನರು ಸೇರಿದಂತೆ ರಾಜ್ಯದಲ್ಲಿ ಸೋಂಕಿತರಾದಂತ 120 ಜನರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇದರಿಂದಾಗಿ ಕಿಲ್ಲರ್ ಕೊರೋನಾಗೆ ಬಲಿಯಾದವರ ಸಂಖ್ಯೆ 33883ಕ್ಕೆ ಏರಿಕೆಯಾಗಿದೆ.
No comments:
Post a Comment