Friday, 25 June 2021

ರಾಜ್ಯದಲ್ಲಿ ಮತ್ತಷ್ಟು ಇಳಿಕೆ ಕಂಡ ಕೊರೋನಾ, 3310 ಪ್ರಕರಣ 614 ಸಾವು.

 


ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಕೊಂಚ ಏರಿಕೆಯಾಗಿದ್ದು ಇಂದು 3,310 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 28,26,754ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 114 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 34,539ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 614 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,09,687ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 17 ಮಂದಿ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಇಂದು ಸಹ ಹೊಸ ಪಾಸಿಟಿವ್ ಪ್ರಕರಣಗಳಿಗಿಂತ ಹೆಚ್ಚು ಅಂದರೆ 6,524 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 26,84,997ಕ್ಕೆ ಏರಿಕೆಯಾಗಿದೆ. ಇನ್ನು 1,07,195 ಸಕ್ರೀಯ ಪ್ರಕರಣಗಳಿವೆ.

ರಾಜ್ಯಾದ್ಯಂತ ಇಂದು 1,58,072 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 3,310 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 2.09ಕ್ಕೆ ಇಳಿದಿದೆ.

 


No comments:

Post a Comment

Featured post

148 ವರ್ಷಗಳ ನಂತರ, 10 ಜೂನ್ 2021 ರ ಮೊದಲ ಸೂರ್ಯಗ್ರಹಣ!!,

ಸಮಗ್ರ ಸುದ್ದಿ ಸ್ಪೇಷಲ್ : ಅಪರೂಪದ ಖಗೋಳ ವಿದ್ಯಾಮಾನದ ಕುರಿತಾಗಿ ವಿಶೇಷ ಲೇಖನ, ನವೀನ್.ಪಿ.ಆಚಾರ್ , ಸಹ ಕಾರ್ಯದರ್ಶಿ , ಚಿತ್ರದುರ್ಗ ವಿಜ್ಞಾನ ಕೇಂದ್ರ.  ಗ್ರಹಣ ಎಂದಾಕ...