Tuesday, 8 June 2021

ದಾವಣಗೆರೆ: ಮಂಗಳವಾರದ ವರದಿಯಲ್ಲಿ 384 ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ.


ದಾವಣಗೆರೆ: ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ 384 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 45722 ಕ್ಕೆ ಏರಿಕೆಯಾಗಿದೆ.

ಇಂದು ಹೊಸದಾಗಿ ದಾವಣಗೆರೆ 184, ಹರಿಹರ 71, ಜಗಳೂರು 27, ಚನ್ನಗಿರಿ 50,
ಹೊನ್ನಾಳಿ 39. ಹೊರ ಜಿಲ್ಲೆಯ 13 ಪ್ರಕರಣಗಳು ಸೇರಿದಂತೆ ಒಟ್ಟು 380 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಮಂಗಳವಾರ 371
ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು
41468 ಜನರು ಗುಣಮುಖರಾಗಿದ್ದಾರೆ.ಕೋವಿಡ್‍ನಿಂದ ಇಂದು ನಾಲ್ವರು
ಮೃತರಾಗಿದ್ದು ಇದುವರೆಗೆ ಒಟ್ಟು 400 ಜನ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಸದ್ಯ 3854
ಸಕ್ರಿಯ ಪ್ರಕರಣಗಳು ಇವೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

No comments:

Post a Comment

Featured post

148 ವರ್ಷಗಳ ನಂತರ, 10 ಜೂನ್ 2021 ರ ಮೊದಲ ಸೂರ್ಯಗ್ರಹಣ!!,

ಸಮಗ್ರ ಸುದ್ದಿ ಸ್ಪೇಷಲ್ : ಅಪರೂಪದ ಖಗೋಳ ವಿದ್ಯಾಮಾನದ ಕುರಿತಾಗಿ ವಿಶೇಷ ಲೇಖನ, ನವೀನ್.ಪಿ.ಆಚಾರ್ , ಸಹ ಕಾರ್ಯದರ್ಶಿ , ಚಿತ್ರದುರ್ಗ ವಿಜ್ಞಾನ ಕೇಂದ್ರ.  ಗ್ರಹಣ ಎಂದಾಕ...