Saturday 26 June 2021

ಚಿತ್ರದುರ್ಗ: ಕೊರೋನಾ 3ನೇ ಅಲೆಗೆ ಸಕಲ ಸಿದ್ಧತೆಗೆ ಕ್ರಮ, ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ.

 


ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-19 ಸಂಭಾವ್ಯ ಮೂರನೇ ಅಲೆಗೆ ಸಕಲ ಸಿದ್ಧತೆಕೈಗೊಳ್ಳಬೇಕು. ಕೋವಿಡ್-19 ಚಿಕಿತ್ಸೆಗೆ ಅಗತ್ಯವಿರುವ ಸೌಲಭ್ಯಗಳ ಕುರಿತು ಶೀಘ್ರದಲ್ಲಿ ಕ್ರಿಯಾಯೋಜನೆ ತಯಾರಿಸುವಂತೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲೆಯಲ್ಲಿ ಕೋವಿಡ್-19 ಸಂಭಾವ್ಯ ಮೂರನೇ ಅಲೆಯ ಸಿದ್ಧತೆಯ ಕುರಿತು ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೋವಿಡ್-19 ಸಂಭಾವ್ಯ ಮೂರನೇ ಅಲೆ ಮಕ್ಕಳಲ್ಲಿ ಸೋಂಕು ಹೆಚ್ಚಳವಾಗುವ ಸಾಧ್ಯತೆ ಇದೆ.ಹಾಗಾಗಿ ಕೋವಿಡ್-19 ಚಿಕಿತ್ಸೆಗೆ ಅಗತ್ಯವಿರುವ ಸಿಬ್ಬಂದಿ, ಸೌಲಭ್ಯಗಳು, ತರಬೇತಿ ಹಾಗೂ ಕೋವಿಡ್ ಕೇರ್ ಸೆಂಟರ್ ಗಳ ಅಗತ್ಯತೆ, ಔಷಧಿ ಸೇರಿದಂತೆ ಯಾವ ರೀತಿಯ ಸೌಲಭ್ಯಗಳಿರಬೇಕು ಎಂಬುವುದರ ಕುರಿತು ಸಂಕ್ಷಿಪ್ತವಾಗಿ ಶೀಘ್ರದಲ್ಲಿ ಕ್ರಿಯಾಯೋಜನೆ ತಯಾರಿಸಬೇಕು ಎಂದು ತಾಕೀತು ಮಾಡಿದರು. ಕೋವಿಡ್ ಮೂರನೇ ಅಲೆ ಸೋಂಕು ನಿಯಂತ್ರಣ ಹಾಗೂ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯೊಂದಿಗೆ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಅಂಗವಿಕಲರ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಸಹ ಅಗತ್ಯ ಸಹಕಾರ ನೀಡಬೇಕು ಎಂದು ಹೇಳಿದರು.

No comments:

Post a Comment