Saturday, 26 June 2021

ಹಾವು ಏಣಿ ಆಟದಲ್ಲಿ ಕೊರೋನಾ, ಇಂದು 4272 ಪ್ರಕರಣ, 115 ಸಾವು.

 

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಇಂದು ಏರಿಕೆಯಾಗಿದ್ದು 4,272 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,31,026ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 115 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 34,654ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.

ಬೆಂಗಳೂರಿನಲ್ಲಿ ಇಂದು 955 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,10,642ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 16 ಮಂದಿ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಇಂದು ಸಹ ಹೊಸ ಪಾಸಿಟಿವ್ ಪ್ರಕರಣಗಳಿಗಿಂತ ಹೆಚ್ಚು ಅಂದರೆ 6,126 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 26,91,123ಕ್ಕೆ ಏರಿಕೆಯಾಗಿದೆ. ಇನ್ನು 1,05,226 ಸಕ್ರೀಯ ಪ್ರಕರಣಗಳಿವೆ.

ರಾಜ್ಯಾದ್ಯಂತ ಇಂದು 1,65,010 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 4,272 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 2.58ಕ್ಕೆ ಇಳಿದಿದೆ.

 


No comments:

Post a Comment

Featured post

148 ವರ್ಷಗಳ ನಂತರ, 10 ಜೂನ್ 2021 ರ ಮೊದಲ ಸೂರ್ಯಗ್ರಹಣ!!,

ಸಮಗ್ರ ಸುದ್ದಿ ಸ್ಪೇಷಲ್ : ಅಪರೂಪದ ಖಗೋಳ ವಿದ್ಯಾಮಾನದ ಕುರಿತಾಗಿ ವಿಶೇಷ ಲೇಖನ, ನವೀನ್.ಪಿ.ಆಚಾರ್ , ಸಹ ಕಾರ್ಯದರ್ಶಿ , ಚಿತ್ರದುರ್ಗ ವಿಜ್ಞಾನ ಕೇಂದ್ರ.  ಗ್ರಹಣ ಎಂದಾಕ...