Thursday, 3 June 2021

ರಾಜ್ಯದಲ್ಲಿ ಜೂನ್ 6ರವರೆಗೆ ಭಾರಿ ಮಳೆ ಸಾಧ್ಯತೆ : ಹಲವು ಜಿಲ್ಲೆಗಳಿಗೆ ಎಲ್ಲೊ ಅಲರ್ಟ್


 ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದ್ದು ಕೆಲವು ಜಿಲ್ಲೆಗಳಿಗೆ ಯೆಲ್ಲೊಆಲರ್ಟ್‌ ನೀಡಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ನೈರುತ್ಯ ಮುಂಗಾರು ಜೂನ್‌ 3ರಂದು ಕೇರಳ ಕರಾವಳಿಗೆ ಅಪ್ಪಳಿಸಲಿದ್ದು, ರಾಜ್ಯಕ್ಕೆ ಜೂನ್‌ 5ರಂದು ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ 5 ದಿನಗಳು ರಾಜ್ಯದ ಒಳನಾಡಿನ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಜೂನ್‌ 4ರವರೆಗೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಮುಖ್ಯವಾಗಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್‌, ಕಲಬುರಗಿ, ಬೆಂ.ಗ್ರಾಮಾಂತರ, ಬೆಂ.ನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಶಿವಮೊಗ್ಗ, ರಾಯಚೂರು, ತುಮಕೂರಿನಲ್ಲಿ ಮಳೆಯಾಗಲಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಜೂನ್‌ 3 ಮತ್ತು 6ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

No comments:

Post a Comment

Featured post

148 ವರ್ಷಗಳ ನಂತರ, 10 ಜೂನ್ 2021 ರ ಮೊದಲ ಸೂರ್ಯಗ್ರಹಣ!!,

ಸಮಗ್ರ ಸುದ್ದಿ ಸ್ಪೇಷಲ್ : ಅಪರೂಪದ ಖಗೋಳ ವಿದ್ಯಾಮಾನದ ಕುರಿತಾಗಿ ವಿಶೇಷ ಲೇಖನ, ನವೀನ್.ಪಿ.ಆಚಾರ್ , ಸಹ ಕಾರ್ಯದರ್ಶಿ , ಚಿತ್ರದುರ್ಗ ವಿಜ್ಞಾನ ಕೇಂದ್ರ.  ಗ್ರಹಣ ಎಂದಾಕ...