Thursday 10 June 2021

ಸೋಮವಾರ ಬೆಳಗ್ಗೆ 6 ಗಂಟೆಯಿಂದಲೇ ಸಿಲಿಕಾನ್ ಸಿಟಿ ಬೆಂಗಳೂರು 'ಅನ್ ಲಾಕ್'


 ಬೆಂಗಳೂರು : ಜೂನ್ 14 ಮುಂದಿನ ಸೋಮವಾರ ಬೆಳಗ್ಗೆ 6 ಗಂಟೆಯಿಂದಲೇ ಸಿಲಿಕಾನ್ ಸಿಟಿ ಬೆಂಗಳೂರು 'ಅನ್ ಲಾಕ್' ಆಗಲಿದೆ ಎಂದು ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಎಲ್ಲಾ ಕಾರ್ಖಾನೆಗಳನ್ನು ಶೇ. 50 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಿದ್ದು, ಗಾರ್ಮೆಂಟ್ ಇಂಡಸ್ಟ್ರೀಗಳು ಶೇ. 30 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಪಾರ್ಕ್ ಗಳನ್ನು ಬೆಳಿಗ್ಗೆ 5 ರಿಂದ 10 ಗಂಟೆಯವರೆಗೆ ಅವಕಾಶ ನೀಡಲಾಗಿದ್ದು, ಬೀದಿ ಬದಿ ವ್ಯಾಪಾರಿಗಳಿಗೆ ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವ್ಯಾಪಾರ ಮಾಡಲು ಅವಕಾಶ ನೀಡಲಾಗಿದೆ.


ಆಟೋ ಮತ್ತು ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಕರಿಗೆ ಅವಕಾಶ, .ಕೋವಿಡ್ ಕರ್ಫ್ಯೂ ರಾತ್ರಿ 7 ಗಂಟೆಯಿಂದ ಬೆಳಿಗ್ಗ 5 ಗಂಟೆಯವರೆಗೆ ಜಾರಿ, ಎಲ್ಲಾ ನಿರ್ಮಾಣ ಚಟುವಟಿಕೆಗಳನ್ನು ಪ್ರಾರಂಭಿಸಲು ಅನುಮತಿ ನೀಡಲಾಗಿದೆ. ಮಧ್ಯಾಹ್ನ 2 ಗಂಟೆವರೆಗೆ ಬಾರ್ ಓಪನ್ ಆದರೆ ಪಾರ್ಸೆಲ್ ಗೆ ಮಾತ್ರ ಅವಕಾಶ ನೀಡಲಾಗಿದ್ದು, ಸಿಮೆಂಟ್, ಸ್ಟೀಲ್ ಅಂಗಡಿ ತೆರೆಯಲು ಅವಕಾಶ ನೀಡಲಾಗಿದೆ.


ಮೈಸೂರು, ದಾವಣಗೆರೆ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ತುಮಕೂರು, ಕೊಡಗು, ಮಂಡ್ಯ, ಚಿಕ್ಕಮಗಳೂರು, ಹಾಸನ, ಬೆಳಗಾವಿ ಸೇರಿದಂತೆ ರಾಜ್ಯದ 11 ಜಿಲ್ಲೆಗಳಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಮಾಣದಲ್ಲಿ ಇಳಿಕೆಯಾಗುತ್ತಿಲ್ಲ. ಹೀಗಾಗಿ ಈ ಜಿಲ್ಲೆಗಳಲ್ಲಿ ಜೂನ್ 14 ರಿಂದ ಜೂನ್ 21 ರವರೆಗೆ ಒಂದು ವಾರ ಲಾಕ್ ಡೌನ್ ಮುಂದುವರೆಸುವುದಾಗಿ ಸಿಎಂ ಯಡಿಯೂರಪ್ಪ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಈ ಜಿಲ್ಲೆಗಳಲ್ಲಿ ಯಾವುದೇ ಸಡಿಲಿಕೆ ಇರುವುದಿಲ್ಲ, ಈಗಿರುವ ಮಾರ್ಗಸೂಚಿಯೇ ಮುಂದುವರೆಯಲಿದೆ, ಉಳಿದ ಜಿಲ್ಲೆಗಳಲ್ಲಿ ಕೆಲವು ಲಾಕ್ ಡೌನ್ ಸಡಿಲಿಕೆ ಮಾಡಲಾಗಿದೆ ಎಂದು ಸಿಎಂ ಘೋಷಿಸಿದ್ದಾರೆ.

No comments:

Post a Comment