ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಶುಕ್ರವಾರದ ವರದಿಯಲ್ಲಿ 702 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಕೋವಿಡ್‍ನಿಂದ ಇಂದು ಒಬ್ಬರು ಮೃತರಾಗಿದ್ದು ಇದುವರೆಗೆ ಒಟ್ಟು 154 ಜನ ಮೃತಪಟ್ಟಿದ್ದಾರೆ. ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 31551ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 255,
ಚಳ್ಳಕೆರೆ 123,
ಹಿರಿಯೂರು 121,
ಹೊಳಲ್ಕೆರೆ 110,
ಹೊಸದುರ್ಗ 64,
ಮೊಳಕಾಲ್ಮುರು ತಾಲ್ಲೂಕಿನ 29 ಪ್ರಕರಣಗಳು
ಜಿಲ್ಲೆಯಲ್ಲಿಂದು ಚಿಕಿತ್ಸೆ ಪಡೆಯುತ್ತಿದ್ದ 454 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಒಟ್ಟು 2878 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.
ಸೋಂಕಿತರ ಪೈಕಿ ಈಗಾಗಲೆ 24359 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 7038 ಸಕ್ರಿಯ ಪ್ರಕರಣಗಳು ಇವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಂಗನಾಥ್ ತಿಳಿಸಿದ್ದಾರೆ.

No comments:
Post a Comment