Wednesday 9 June 2021

BIG BREAKING: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಏರಿಕೆ, ಪಾಸಿಟಿವಿಟಿ ದರ ಶೇ.6.68 ಕ್ಕೆ ಇಳಿಕೆ -ಇಲ್ಲಿದೆ ಜಿಲ್ಲೆಗಳ ಮಾಹಿತಿ


 ಬೆಂಗಳೂರು: ರಾಜ್ಯದಲ್ಲಿ ನಿನ್ನೆಗಿಂತ ಇಂದು ಮತ್ತೆ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಪಾಸಿಟಿವಿಟಿ ದರ ಶೇಕಡ 6.58 ರಷ್ಟು ಇಳಿಕೆಯಾಗಿದೆ.

10,959 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇಂದು 192 ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೆ 32,291 ಮಂದಿ ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 27,28,248 ಕ್ಕೆ ಏರಿಕೆಯಾಗಿದೆ. ಇವತ್ತು 20,246 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 24,80,411 ಮಂದಿ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 2,15,525 ಸಕ್ರಿಯ ಪ್ರಕರಣಗಳು ಇವೆ.

ಬೆಂಗಳೂರಿನಲ್ಲಿ 2395 ಜನರಿಗೆ ಕೊರೊನಾ ಸೋಂಕು ತಗಲಿದ್ದು, 50 ಸೋಂಕಿತರು ಸಾವನ್ನಪ್ಪಿದ್ದಾರೆ. 6185 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 98,125 ಸಕ್ರಿಯ ಪ್ರಕರಣಗಳಿವೆ.

ಮೈಸೂರು, ದಕ್ಷಿಣ ಕನ್ನಡ, ತುಮಕೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯ ಜನರಲ್ಲಿ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

No comments:

Post a Comment