Saturday 12 June 2021

BIG BREAKING NEWS : 'SSLC ವಾರ್ಷಿಕ ಪರೀಕ್ಷೆ'ಯ 'ಮಾದರಿ ಪ್ರಶ್ನೆಪತ್ರಿಕೆ' ರಿಲೀಸ್ : ಈ ವಿಧಾನದ ಮೂಲಕ ಪ್ರಶ್ನೆಪತ್ರಿಕೆ ಡೌನ್ ಲೋಡ್ ಮಾಡಿಕೊಳ್ಳಿ


 ಬೆಂಗಳೂರು : ಜುಲೈ 2021ರ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಸಂಬಂಧಿಸಿದ ಬಹು ಆಯ್ಕೆ ಪ್ರಶ್ನೆ ಆಧಾರಿತ ಮಾದರಿ ಪ್ರಶ್ನೆಪತ್ರಿಕೆಗಳನ್ನು, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ.

ಈ ಕುರಿತಂತೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕಿ ವಿ.ಸುಮಂಗಲ ಅವರು ಮಾಹಿತಿ ಬಿಡುಗಡೆ ಮಾಡಿದ್ದು, ಪ್ರಸಕ್ತ ವರ್ಷ ಕೋವಿಡ್-19 ವ್ಯಾಪಕವಾಗುತ್ತಿರುವ ಹಿನ್ನಲೆಯಲ್ಲಿ, ಜೂನ್ 2021ರಲ್ಲಿ ನಡೆಯಬೇಕಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಮುಂದೂಡಲಾಗಿತ್ತು.


ಪ್ರಸ್ತುತ ಪರೀಕ್ಷಾ ವಿಧಾನವನ್ನು ಸರಳೀಕರಿಸಿ ಎರಡು ದಿನಗಳಿಗೆ ಪರೀಕ್ಷೆಯನ್ನು ಸೀಮಿತಗೊಳಿಸಿ, ಬಹು ಆಯ್ಕೆ ಪ್ರಶ್ನೆ ( Multiple Choice Question Based ) ಮಾದರಿಯಲ್ಲಿ ವಿಷಯವಾರು ಗರಿಷ್ಠ 40 ಅಂಕಗಳಿಗೆ ಪರೀಕ್ಷೆಯನ್ನು ನಡೆಸಲು ತೀರ್ಮಾನಿಸಲಾಗಿದೆ.ಅದರ ಹಿನ್ನಲೆಯಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೋರ್ ವಿಷಯಗಳಾದ ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯಗಳ ಬಹು ಆಯ್ಕೆ ಪ್ರಶ್ನೆ ಆಧಾರಿತ ಮದಾರಿ ಪ್ರಶ್ನೆ ಪತ್ರಿಕೆ ಮತ್ತು ಉತ್ತರಗಳನ್ನು ಶೇಡ್ ಮಾಡುವ ಓಎಂಆರ್ ಗಳ ಮಾದರಿಯನ್ನು ಮಂಡಳಿಯ http://sslc.karnataka.gov.in ನಲ್ಲಿ ಪ್ರಕಟಿಸಲಾಗಿದೆ.

ಈ ಬಗ್ಗೆ ಸಂಬಂಧಿಸಿದ ಶಾಲಾ ಮುಖ್ಯ ಶಿಕ್ಷಕರು ಸದರಿ ಮಾದರಿ ಪ್ರಶ್ನೆ ಪತ್ರಿಕೆ ಮತ್ತು ಓಎಂಆರ್ ಗಳ ಮಾದರಿಯನ್ನು ಡೌನ್ ಲೋಡ್ ಮಾಡಿಕೊಂಡು, ವಿದ್ಯಾರ್ಥಿಗಳ ಅಭ್ಯಾಸಕ್ಕೆ ಅನುವಾಗುವಂತೆ ಕ್ರಮವಹಿಸಲು ಸೂಚಿಸಿದೆ. ಉಳಿದಂತೆ ಭಾಷಾ ವಿಷಯಗಳ ಮಾದರಿ ಪ್ರಶ್ನೆಪತ್ರಿಕೆಗಳನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.


ಮಾದರಿ ಪ್ರಶ್ನೆಪತ್ರಿಕೆಗಳನ್ನು ಡೌನ್ ಲೋಡ್ ಮಾಡಿಕೊಳ್ಳೋದು ಹೇಗೆ.?


ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಜಾಲತಾಣ http://sslc.karnataka.gov.in ಗೆ ಭೇಟಿ ನೀಡಬೇಕು. ಇಲ್ಲಿ Documents ಎನ್ನುವಲ್ಲಿ . ಆನಂತ ಎಸ್ ಎಸ್ ಎಲ್ ಸಿ ಎಂಲ್ಲಿ ನೀವು ದ್ರೇ.. ಆನಂತ್ರ Question Papers ಮೇಲೆ Model Question Papers ಓಪನ್ ಆಗಲಿದೆ. ಅದರಲ್ಲಿ MCQ Model Question Papers ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.



No comments:

Post a Comment