Wednesday, 2 June 2021

BIG NEWS: ನಿರ್ಮಲಾನಂದ ಸ್ವಾಮೀಜಿ ಭೇಟಿಯಾದ ಸಚಿವ ಯೋಗೇಶ್ವರ್; ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾದ್ರಾ ಸಿ.ಪಿ.ವೈ..?


 ರಾಮನಗರ: ಸಿ.ಪಿ. ಯೋಗೇಶ್ವರ್ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು ಎಂಬ ಒತ್ತಾಯಗಳು ಕೇಳಿಬಂದ ಬೆನ್ನಲ್ಲೇ ಇದೀಗ ಎಚ್ಚೆತ್ತ ಯೋಗೇಶ್ವರ್ ಕೆಲ ಸ್ವಾಮಿಜಿಗಳ ಮೂಲಕವೇ ಸಂಧಾನ ನಡೆಸಲು ಯೋಜನೆ ರೂಪಿಸಿದ್ದಾರೆ ಎನ್ನಲಾಗಿದೆ.

ಇಂದು ಸಿ.ಪಿ.ಯೋಗೇಶ್ವರ್ ಬಿಜಿಎಸ್ ಶಾಖಾ ಮಠಕ್ಕೆ ತೆರಳಿ ನಿರ್ಮಲಾನಂದ ಸ್ವಾಮೀಜಿ ಭೇಟಿಯಾಗಿ ಮಾತುಕತೆ ನಡೆಸಿರುವುದು ಇಂತದ್ದೊಂದು ಕುತೂಹಲಕ್ಕೆ ಕಾರಣವಾಗಿದೆ.

ಈ ವೇಳೆ ಮಾತನಾಡಿದ ಯೊಗೇಶ್ವರ್, ನಾನು ಯಾವಾಗಲೂ ಸ್ವಾಮೀಜಿಗಳನ್ನು ಭೇಟಿಯಾಗುತ್ತಲೆ ಇರುತ್ತೇನೆ. ಇನ್ನೂ ನಾಲ್ವರು ಸ್ವಾಮೀಜಿಗಳನ್ನು ಭೇಟಿ ಮಾಡುತ್ತೇನೆ. ರಾಜಕೀಯ ವಿಚಾರದ ಬಗ್ಗೆ ನಾನೇನೂ ಮಾತನಾಡಲ್ಲ ಎಂದು ಹೇಳಿದರು. ಒಟ್ಟಾರೆ ಸಿ.ಪಿ.ಯೋಗೇಶ್ವರ್ ಸ್ವಾಮೀಜಿಗಳ ಮೂಲಕವೇ ಸಂಧಾನ ಯತ್ನ ನಡೆಸುವ ಮೂಲಕ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.

No comments:

Post a Comment

Featured post

148 ವರ್ಷಗಳ ನಂತರ, 10 ಜೂನ್ 2021 ರ ಮೊದಲ ಸೂರ್ಯಗ್ರಹಣ!!,

ಸಮಗ್ರ ಸುದ್ದಿ ಸ್ಪೇಷಲ್ : ಅಪರೂಪದ ಖಗೋಳ ವಿದ್ಯಾಮಾನದ ಕುರಿತಾಗಿ ವಿಶೇಷ ಲೇಖನ, ನವೀನ್.ಪಿ.ಆಚಾರ್ , ಸಹ ಕಾರ್ಯದರ್ಶಿ , ಚಿತ್ರದುರ್ಗ ವಿಜ್ಞಾನ ಕೇಂದ್ರ.  ಗ್ರಹಣ ಎಂದಾಕ...