ತ್ರದುರ್ಗ: ಕೋವಿಡ್ ಎರಡನೆ ಹಂತದ ಪ್ರಗತಿ ಪರಿಶೀಲನೆ ಹಾಗೂ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮೈಕ್ರೋ ಕೋವಿಡ್ ಕೇರ್ ಸೆಂಟರ್ಗಳನ್ನು ತೆರೆಯುವ ಕುರಿತು ಬುಧವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಗ್ರಾಮ ಪಂಚಾಯಿತಿ ಪಿಡಿಓ, ಗ್ರಾಮ ಲೆಕ್ಕಾಧಿಕಾರಿ ಹಾಗೂ ಪಂಚಾಯಿತಿ ಮಟ್ಟದ ನೋಡಲ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕೊರೋನಾ ಪಾಸಿಟಿವ್ ಇರುವವರು ಮನೆಯಲ್ಲಿರಲು ಬಿಡಬೇಡಿ. ಮನವೊಲಿಸಿ ಮೈಕ್ರೋ ಕೋವಿಡ್ ಸೆಂಟರ್ ಇಲ್ಲವೆ ಚಿತ್ರದುರ್ಗ ಜಿಲ್ಲಾಸ್ಪತ್ರೆ ಕೋವಿಡ್ ಸೆಂಟರ್ಗೆ ದಾಖಲಿಸಿ ಇಲ್ಲದಿದ್ದರೆ ಕೊರೋನಾ ನಿಯಂತ್ರಿಸುವುದು ಕಷ್ಟವಾಗುತ್ತದೆ ಎಂದು ಪಿಡಿಓ, ಗ್ರಾಮ ಲೆಕ್ಕಾಧಿಕಾರಿ, ಪಂಚಾಯಿತಿ ಮಟ್ಟದ ನೋಡಲ್ ಅಧಿಕಾರಿಗಳಿಗೆ ತಾಕೀತು ಮಾಡಿದರು. ಇಪ್ಪತ್ತಕ್ಕೂ ಹೆಚ್ಚು ಕೊರೋನಾ ಸೋಂಕಿತರು ಕಂಡು ಬಂದರೆ ಅಂತಹ ಗ್ರಾಮಗಳನ್ನು ಸೀಲ್ಡೌನ್ ಮಾಡಿ ಮನೆಗಳಿಗೆ ರೆಡ್ಲೇಬಲ್ ಅಂಟಿಸಿ. ನಿರ್ಲಕ್ಷೆ ವಹಿಸಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ
ಕೊರೋನಾ ಸೋಂಕಿತರನ್ನು ಪ್ರತ್ಯೇಕವಾಗಿಡುವುದು ಸವಾಲಿನ ಕೆಲಸ. ಕೆಲವರು ಕೋವಿಡ್ ಕೇರ್ ಸೆಂಟರ್ಗಳಿಗೆ ದಾಖಲಾಗಲು ವಿತ್ತಂಡ ವಾದ ಮಾಡುತ್ತಾರೆ. ಅಂತಹವರನ್ನು ಮನವೊಲಿಸಿ ಕೋವಿಡ್ ಕೇರ್ಸೆಂಟರ್ಗೆ ಕರೆ ತನ್ನಿ ಎಂದರು.
ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಮೈಕ್ರೋ ಕೋವಿಡ್ ಕೇರ್ ಸೆಂಟರ್ಗಳನ್ನು ತೆರೆಯಲು ಸರ್ಕಾರ ಪ್ರತಿ ಪಂಚಾಯಿತಿಗೆ ಐವತ್ತು ಸಾವಿರ ರೂ.ಗಳನ್ನು ಬಿಡುಗಡೆಗೊಳಿಸಿದೆ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ನಂದಿನಿದೇವಿ ಮಾತನಾಡಿ ಅದರಲ್ಲಿ ಸೋಂಕಿತರಿಗೆ ತಿಂಡಿ, ಊಟಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಗ್ರಾಮಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಬೆಡ್, ಕಾಟ್ ವ್ಯವಸ್ಥೆ ಮಾಡಿಕೊಳ್ಳಿ. ಕುಡಿಯುವ ನೀರು, ಫ್ಯಾನ್, ನ್ಯೂಸ್ ಪೇಪರ್ಗಳನ್ನು ಸೋಂಕಿತರಿಗೆ ತಲುಪಿಸಬೇಕು. ಎಂದು ಸೂಚಿಸಿದರು
ತಹಶೀಲ್ದಾರ್ ಜೆ.ಸಿ.ವೆಂಕಟೇಶಯ್ಯ, ಜಿಲ್ಲಾ ಆರೋಗ್ಯ ಮತ್ತು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹನುಮಂತಪ್ಪ ಕುಟುಂಬ ಕಲ್ಯಾಣಾಧಿಕಾರಿ ಡಾ.ಪಾಲಾಕ್ಷ, ಕೋವಿಡ್-19 ಜಾಗೃತಿ ನೋಡಲ್ ಅಧಿಕಾರಿ ಕೃಷ್ಣಪ್ಪ, ವೇದಿಕೆಯಲ್ಲಿದ್ದರು.
No comments:
Post a Comment