Saturday 19 June 2021

ಚಳ್ಳಕೆರೆ ತಾಲೂಕು ಅಬ್ಬೇನಹಳ್ಳಿ ಗ್ರಾಮದಲ್ಲಿ, ಮನೆ ಮನೆಗೂ ಮಾಸ್ಕ್.

ನಾಯಕನಹಟ್ಟಿ: ಸಮೀಪದ ಅಬ್ಬೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊರಡಿಹಳ್ಳಿಯಲ್ಲಿ ಮನೆ ಮನೆಗೂ ತೆರಳಿದ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಲ್ಲೇಬೋರನಹಟ್ಟಿ ಬಿ. ಶಂಕರಸ್ವಾಮಿ ಸೇರಿ ಆಡಳಿತ ಮಂಡಳಿ ಸದಸ್ಯರು ಶುಕ್ರವಾರ ಮಾಸ್ಕ್ ಗಳನ್ನು ವಿತರಿಸಿ ಜಾಗೃತಿ ಮೂಡಿಸಿದರು.

ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ಬಿ.ಶಂಕರಸ್ವಾಮಿ ಮಾತನಾಡಿ, ಸರ್ಕಾರ ಲಾಕ್ಡೌನ್ ಸಡಿಲಿಕೆ ಮಾಡಿದೆ ಎಂದು ಹೊರಗಡೆ ತಿರುಗಾಡುವವರು ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಕೋವಿಡ್ ಮೂರನೇ ಅಲೆ ಬರುವ ಸಾಧ್ಯತೆಯನ್ನು ತಜ್ಞರು ಹೇಳಿರುವುದರಿಂದ ಎಚ್ವರಿಕೆಯಿಂದ ಇರಬೇಕು. ಸರ್ಕಾರದ ಕೋವಿಡ್ ಮಾರ್ಗಸೂಚಿಯನ್ನು ಅನುಸರಿಸಬೇಕು ಎಂದು ತಿಳಿಸಿದರು.

ಗ್ರಾಪಂ ಪಿಡಿಒ ಶಶಿಕಲಾ ಮಾತನಾಡಿ, ಮಕ್ಕಳ ಆರೋಗ್ಯ ಬಗ್ಗೆ ಪಾಲಕರು ಗಮನಹರಿಸಬೇಕು. ಕೊರೋನಾ ಸೋಂಕು ಸಂಪೂರ್ಣವಾಗಿ ನಿವಾರಣೆಯಾಗಿಲ್ಲ. ಆದ್ದರಿಂದ ಜನರು ಮುಖಕ್ಕೆ ಮಾಸ್ಕ್ ಧರಿಸುವುದು, ಆಗಾಗ ಕೈಗಳನ್ನು ತೊಳೆದುಕೊಳ್ಳುವುದು ಸೇರಿ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಕೆ.ಸಿ.ರಾಧಾ ರೇವಣ್ಣ, ಸದಸ್ಯೆ ಪಾಪಮ್ಮ ಸೇರಿ ಗ್ರಾಪಂ ಸಿಬ್ಬಂದಿ ಇದ್ದರು.


No comments:

Post a Comment