Sunday, 13 June 2021

ನಟ ಸಂಚಾರಿ ವಿಜಯ್ ಬೈಕ್ ಅಪಘಾತ ಕೇಸ್; ಸ್ನೇಹಿತನ ವಿರುದ್ಧ ದೂರು.


 
ಬೆಂಗಳೂರು: ಸ್ಯಾಂಡಲ್ ವುಡ್ ಖ್ಯಾತ ನಟ ಸಂಚಾರಿ ವಿಜಯ್ ಬೈಕ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಚಾರಿ ವಿಜಯ್ ಸ್ನೇಹಿತ ನವೀನ್ ವಿರುದ್ಧ ವಿಜಯ್ ಸಹೋದರ ದೂರು ನೀಡಿದ್ದಾರೆ. 

ಸಂಚಾರಿ ವಿಜಯ್ ಹಾಗೂ ಅವರ ಸ್ನೇಹಿತ ನವೀನ್ ಬೈಕ್ ನಲ್ಲಿ ತೆರಳುತ್ತಿದ್ದಾಗ ತಡರಾತ್ರಿ ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ತೊಡೆಯ ಭಾಗದಲ್ಲಿ ಮುರಿದಿದ್ದು, ಮೆದುಳಿನಲ್ಲಿ ತೀವ್ರ ರಕ್ತಸ್ರಾವದಿಂದ ಗಂಭೀರ ಸ್ಥಿತಿ ತಲುಪಿರುವ ವಿಜಯ್ ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಈ ನಡುವೆ ಸಂಚಾರಿ ವಿಜಯ್ ಸ್ನೇಹಿತ ನವೀನ್ ವಿರುದ್ಧ ವಿಜಯ್ ಸಹೋದರ ಸಿದ್ದೇಶ್ ಕುಮಾರ್ ದೂರು ನೀಡಿದ್ದಾರೆ. ಬೈಕ್ ವಶಕ್ಕೆ ಪಡೆದಿರುವ ಜಯನಗರ ಸಂಚಾರಿ ಠಾಣೆ ಪೊಲೀಸರು ನವೀನ್ ವಿಚಾರಣೆ ನಡೆಸಿದ್ದಾರೆ. ತಾನು ಬೈಕ್ ಓಡಿಸುತ್ತಿದ್ದು, ಸಂಚಾರಿ ವಿಜಯ್ ಹಿಂಬದಿ ಕುಳಿತಿದ್ದರು. ಬೈಕ್ ಸ್ಕಿಡ್ ಆಗಿ ಅಪಘಾತ ಸಂಭವಿಸಿದೆ ಎಂದು ನವೀನ್ ಹೇಳಿದ್ದಾರೆ ಎನ್ನಲಾಗಿದೆ.


ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ಸಂಚಾರಿ ವಿಜಯ್ ಗೆ ಮೆದುಳಿನ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

No comments:

Post a Comment

Featured post

148 ವರ್ಷಗಳ ನಂತರ, 10 ಜೂನ್ 2021 ರ ಮೊದಲ ಸೂರ್ಯಗ್ರಹಣ!!,

ಸಮಗ್ರ ಸುದ್ದಿ ಸ್ಪೇಷಲ್ : ಅಪರೂಪದ ಖಗೋಳ ವಿದ್ಯಾಮಾನದ ಕುರಿತಾಗಿ ವಿಶೇಷ ಲೇಖನ, ನವೀನ್.ಪಿ.ಆಚಾರ್ , ಸಹ ಕಾರ್ಯದರ್ಶಿ , ಚಿತ್ರದುರ್ಗ ವಿಜ್ಞಾನ ಕೇಂದ್ರ.  ಗ್ರಹಣ ಎಂದಾಕ...