Wednesday, 23 June 2021

ರಾಜ್ಯದಲ್ಲಿ ಇಬ್ಬರಿಗೆ ಡೆಲ್ಟಾ ವೈರಸ್ ಪತ್ತೆ, ಸಚಿವ ಡಾ. ಸುಧಾಕರ್.

 

ಬೆಂಗಳೂರು : ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರ ಡಾ.ಕೆ.ಸುಧಾಕರ್, ರಾಜ್ಯದಲ್ಲಿ ಇಬ್ಬರಿಗೆ ಡೆಲ್ಟಾ ಪ್ಲಸ್ ವೈರಸ್ ಸೋಂಕು ತಗುಲಿರೋದನ್ನು ದೃಢಪಡಿಸಿದ್ದಾರೆ.

ಈ ಕುರಿತಂತೆ ಮಾತಾಡಿದಂತ ಅವರು, ರಾಜ್ಯದಲ್ಲಿ ಇಬ್ಬರಿಗೆ ಡೆಲ್ಟಾ ಪ್ಲಸ್ ವೈರಸ್ ಸೋಂಕು ಪತ್ತೆಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲಿ ತಲಾ ಒಬ್ಬರು ಸೇರಿದಂತೆ ಇಬ್ಬರಿಗೆ ಸೋಂಕು ತಗುಲಿದೆ. ಗೌಪ್ಯತೆಯ ದೃಷ್ಠಿಯಿಂದ ಹೆಚ್ಚಿನ ಮಾಹಿತಿಯನ್ನು ನೀಡಲಾಗೋದಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಡೆಲ್ಟಾ ಪ್ಲಸ್ ವೈರಸ್ ಸೋಂಕು ಕಾಲಿಟ್ಟಿರೋದನ್ನು ಖಚಿತ ಪಡಿಸಿದ್ದಾರೆ.

ಇನ್ನೂ ಡೆಲ್ಟಾ ಪ್ಲಸ್ ಬಗ್ಗೆ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ. ಸೋಂಕಿನ ಗುಣಲಕ್ಷಣಗಳು ಕಂಡು ಬಂದರೇ ಸ್ಯಾಂಪಲ್ ಸಂಗ್ರಹಕ್ಕೂ ಮುಂದಾಗಿದೆ. ಹೆಚ್ಚು ಹೆಚ್ಚು Random ಪರೀಕ್ಷೆಗೂ ಸೂಚಿಸಲಾಗಿದೆ. ರೋಗದ ನಿಯಂತ್ರಣಕ್ಕೂ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಹೇಳಿದ್ದಾರೆ.
ಅಂದಹಾಗೇ ನಿನ್ನೆ ಕೇಂದ್ರ ಆರೋಗ್ಯ ಇಲಾಖೆಯು ದೇಶದಲ್ಲಿ 40ಕ್ಕೂ ಹೆಚ್ಚು ಡೆಲ್ಟಾ ಪ್ಲಸ್ ವೈರಸ್ ಪ್ರಕರಣಗಳು ಪತ್ತೆಯಾಗಿರೋದಾಗಿ ತಿಳಿಸಿತ್ತು. ಕೇರಳದಲ್ಲಿ 3, ಮಧ್ಯಪ್ರದೇಶದಲ್ಲಿ ಒಬ್ಬರಿಗೆ ಹಾಗೂ ಮಹಾರಾಷ್ಟ್ರದಲ್ಲಿ 21 ಜನರಿಗೆ ಡೆಲ್ಟಾ ಪ್ಲಸ್ ವೈರಸ್ ತಗುಲಿರೋದನ್ನು ತಿಳಿಸಿತ್ತು. ಇದೀಗ ಈ ಬಳಿಕ ಕರ್ನಾಟಕದಲ್ಲಿಯೂ ಇಬ್ಬರಿಗೆ ಡೆಲ್ಟಾ ಪ್ಲಸ್ ಸೋಂಕು ತಗುಲಿರೋದು ಖಚಿತಗೊಂಡಿದೆ.

No comments:

Post a Comment

Featured post

148 ವರ್ಷಗಳ ನಂತರ, 10 ಜೂನ್ 2021 ರ ಮೊದಲ ಸೂರ್ಯಗ್ರಹಣ!!,

ಸಮಗ್ರ ಸುದ್ದಿ ಸ್ಪೇಷಲ್ : ಅಪರೂಪದ ಖಗೋಳ ವಿದ್ಯಾಮಾನದ ಕುರಿತಾಗಿ ವಿಶೇಷ ಲೇಖನ, ನವೀನ್.ಪಿ.ಆಚಾರ್ , ಸಹ ಕಾರ್ಯದರ್ಶಿ , ಚಿತ್ರದುರ್ಗ ವಿಜ್ಞಾನ ಕೇಂದ್ರ.  ಗ್ರಹಣ ಎಂದಾಕ...