Saturday 12 June 2021

ಚಿತ್ರದುರ್ಗ: ಸೋಮವಾರದಿಂದ ಜಾರಿಯಾಗಲಿರುವ ಹೊಸ ರೂಲ್ಸ್.

ಚಿತ್ರದುರ್ಗ :ಜೂನ್ 14 ರಿಂದ ಜಾರಿಗೆ ಬರಲಿರುವ ರಾಜ್ಯ ಸರ್ಕಾರದ ಪರಿಷ್ಕೃತ ಮಾರ್ಗಸೂಚಿ ಅನ್ವಯ ಏನಿರುತ್ತೆ, ಏನಿರಲ್ಲ. ಜೂನ್ 14 ರಿಂದ ಸರ್ಕಾರದ ಪರಿಷ್ಕøತ ಮಾರ್ಗಸೂಚಿಯು ಜಿಲ್ಲೆಯಲ್ಲಿ ಯಥಾವತ್ತಾಗಿ ಜಾರಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.


 ಜಿಲ್ಲೆಯಲ್ಲಿ ದಿನ ಬಿಟ್ಟು ದಿನ ಜಾರಿಗೊಳಿಸಲಾಗಿದ್ದ ಲಾಕ್‍ಡೌನ್ ಅನ್ನು ಹಿಂಪಡೆಯಲಾಗಿದ್ದು, ಪ್ರತಿ ದಿನ ಬೆಳಿಗ್ಗೆ 6 ರಿಂದ 10 ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಮಾಡಿಕೊಡಲಾಗಿತ್ತು.

 ಯಾವುದಕ್ಕೆಲ್ಲ ವಿನಾಯಿತಿ: ಜೂನ್ 11ರಂದು ಕೋವಿಡ್-19 ರೋಗ ತಡೆ ಮಾರ್ಗಸೂಚಿಗಳನ್ನು ಪರಿಷ್ಕರಿಸಿದ್ದು, ಕೆಲವೊಂದು ಚಟುವಟಿಕೆಗಳಿಗೆ ವಿನಾಯಿತಿ ನೀಡಿ ಆದೇಶಿಸಲಾಗಿರುತ್ತದೆ. ಹೊಸ ಮಾರ್ಗಸೂಚಿಯನ್ವಯ ಆಹಾರ, ದಿನಸಿ, ಹಣ್ಣು ತರಕಾರಿ,  ಮಾಂಸ, ಮೀನು, ಡೇರಿ ಉತ್ಪನ್ನಗಳು, ಹಾಲಿನ ಬೂತ್, ಪ್ರಾಣಿ ಆಹಾರ, ಬೀದಿ ಬದಿ ವ್ಯಾಪಾರ, ಪಡಿತರ ಅಂಗಡಿಗಳನ್ನು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ರವರೆಗೆ ತೆರೆಯಬಹುದು. ಕನ್ನಡಕದ ಅಂಗಡಿಗಳಿಗೂ ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ತೆರೆಯಲು ಅವಕಾಶ ನೀಡಲಾಗಿದೆ.ಈ ಆದೇಶವು ಜೂನ್ 14 ರ ಮುಂಜಾನೆ 5 ರಿಂದ ಜೂನ್ 21ರ ಮುಂಜಾನೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

ವಾರಾಂತ್ಯ ಕರ್ಫ್ಯೂ :ಮುಂದುವರೆದು ವಾರಾಂತ್ಯಕ್ಕೆ ಶುಕ್ರವಾರ ಸಂಜೆ 7 ರಿಂದ ಸೋಮವಾರ ಮುಂಜಾನೆ 5 ರವರೆಗೆ ವಾರಾಂತ್ಯ ಕಫ್ರ್ಯೂ ಹಾಗೂ ಪ್ರತಿ ದಿನ ಸಂಜೆ 7 ರಿಂದ ಮರು ದಿನ ಮುಂಜಾನೆ 5 ರವರೆಗೆ ರಾತ್ರಿ  ಕಫ್ಯೂ ಜಾರಿಗೊಳಿಸಿ ಆದೇಶಿಸಲಾಗಿರುತ್ತದೆ.

ಕಂಡಿಷನ್ಸ್ ಅಪ್ಲೈ: ಮಧ್ಯಾಹ್ನ 2 ರ ಬಳಿಕ ಅನಗತ್ಯವಾಗಿ ಯಾರು ರಸ್ತೆಗಿಳಿಯುವಂತಿಲ್ಲ. ಅಂಗಡಿ ಮುಂಗಟ್ಟುಗಳನ್ನು 2 ಗಂಟೆಗೆ ಸರಿಯಾಗಿಮುಚ್ಚಬೇಕು. ಉದ್ಯಾನ ವನಗಳಲ್ಲಿ ಬೆಳಿಗ್ಗೆ 5 ರಿಂದ 10 ರವರೆಗೆ ವಾಕ್ ಮತ್ತು ಜಾಗಿಂಗ್ ಮಾಡಬಹುದು. ಅಲ್ಲಿ ಗುಂಪು ಸೇರುವಂತಿಲ್ಲ. ದಿನದ 24 ಗಂಟೆಯು ಎಲ್ಲ ಬಗೆಯ ವಸ್ತುಗಳನ್ನು ಮನೆಗಳಿಗೆ ಪೂರೈಕೆ ಮಾಡುವ ಹೋಂ ಡೆಲಿವರಿಗೆ ಅವಕಾಶ ನೀಡಲಾಗಿದೆ. ಬಾರ್,  ಹೋಟೆಲ್‍ಗಳಲ್ಲಿ ಪಾರ್ಸೆಲ್‍ಗೆ ಅವಕಾಶ, ಮದ್ಯ ಮಳಿಗೆಗಳು ಮಧ್ಯಾಹ್ನ 2 ಗಂಟೆಯವರೆಗೆ ತೆರೆಯಬಹುದು. ಬಸ್ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಆಟೋ ಮತ್ತು ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಸಲು ಅವಕಾಶ ನೀಡಲಾಗಿದೆ.

ಯಾವುದಕ್ಕೆಲ್ಲ ಅನುಮತಿ:  ಕಟ್ಟಡ ನಿರ್ಮಾಣ ಚಟುವಟಿಕೆಗಳಿಗೆ ಅವಕಾಶ, ಕೃಷಿ ಇಲಾಖೆ ಮತ್ತು ಸಂಬಂಧಿತ ಕಚೇರಿಗಳು, ಲೋಕೋಪಯೋಗಿ ಇಲಾಖೆ, ವಸತಿ,  ಸಹಕಾರ, ಕಂದಾಯ, ನಬಾರ್ಡ್ ಮತ್ತು  ಕೇಂದ್ರ ಸರ್ಕಾರದ ಕಚೇರಿಗಳು ಶೇ.50ರಷ್ಟು ಸಿಬ್ಬಂದಿಯನ್ನು ಇಟ್ಟುಕೊಂಡು ಕಾರ್ಯನಿರ್ವಹಿಸಬೇಕು ಎಂದು ಸೂಚಿಸಲಾಗಿದೆ

ದಂಡಂ ದಶಗುಣಂ: ಸರ್ಕಾರಿ ಆದೇಶದ ಅನುಬಂಧದಲ್ಲಿ ಪ್ರಸ್ತಾಪಿಸಿರುವ ಚಟುವಟಿಕೆಗಳನ್ನು ಹೊರತು ಪಡಿಸಿ ಉಳಿದ ಎಲ್ಲ ಚಟುವಟಿಕೆಗಳನ್ನು ಸಾಮಾಜಿಕ ಅಂತರ ಹಾಗೂ ಸೂಕ್ತ ಎಚ್ಚರಿಕಾ ಕ್ರಮಗಳನ್ನು ಅನುಸರಿಸಿ ಮುಂದುವರೆಸಲು ಅವಕಾಶ ನೀಡಲಾಗಿದೆ. ವೈಯಕ್ತಿಕ ಒಡಾಟಗಳು, ಅನಿವಾರ್ಯವಲ್ಲದ ಚಟುವಟಿಕೆಗಳ ಕಾರ್ಯನಿರ್ವಹಣೆಯು ಕಡ್ಡಾಯವಾಗಿ ನಿಷೇಧಿಸಿ ಆದೇಶಿಸಿದ್ದು, ಇದನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು  ನಿರ್ವಹಣಾ ಕಾಯ್ದೆ-2005 ಮತ್ತು ಭಾರತೀಯ ದಂಡ ಸಂಹಿತೆಯನ್ವಯ ಸೂಕ್ತ ಕಾನೂನು ಕ್ರಮಕ್ಕೆ ಒಳಪಡಿಸಲಾಗುವುದು.

ಈ ಆದೇಶದ ಪರಿಣಾಮಕಾರಿ ಜಾರಿಗೆ ಕ್ರಮಕೈಗೊಳ್ಳಲು ಪೊಲೀಸ್ ಅಧೀಕ್ಷಕರು, ಉಪವಿಭಾಗಾಧಿಕಾರಿಗಳು, ಜಿಲ್ಲೆಯ ಎಲ್ಲ ತಾಲ್ಲೂಕಿನ ತಹಶೀಲ್ದಾರ್‍ಗಳು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ನಗರಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು, ಮುಖ್ಯಾಧಿಕಾರಿಗಳಿಗೆ ಸೂಚಿಸಿದೆ.

ಸರ್ಕಾರದ ಮಾರ್ಗಸೂಚಿಯಲ್ಲಿ ಪ್ರಸ್ತಾಪಿಸಿರುವ ವಿವಿಧ ವಲಯವಾರು ಚಟುವಟಿಕೆಗಳ ನಿರ್ಬಂಧಗಳ ಬಗ್ಗೆ ಆದೇಶವನ್ನು ಪರಿಣಾಮಕಾರಿ ಜಾರಿಗೊಳಿಸಿ, ನಿಯಮಿತವಾಗಿಪರಿಸ್ಥಿತಿಯನ್ನು ಅವಲೋಕಿಸಿ ಕ್ರಮಕೈಗೊಳ್ಳಲು ಸಂಬಂಧಪಟ್ಟ ಇಲಾಖೆಯ ಜಿಲ್ಲಾ ಮುಖ್ಯಸ್ಥರಿಗೆ ಸೂಚಿಸಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.

No comments:

Post a Comment