Wednesday, 9 June 2021

ಚಿತ್ರದುರ್ಗ- ಇಳಿಕಯತ್ತ, ಕರೋನ ಮಹಾಮಾರಿ.


 ಚಿತ್ರದುರ್ಗ,ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಬುಧವಾರದ ವರದಿಯಲ್ಲಿ 200 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇಂದು ಕರೋನ ಸೋಂಕಿನಿಂದ ಓರ್ವರು ಮೃತಪಟ್ಟಿದ್ದಾರೆ. ಇದರಿಂದಾಗಿ ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 158 ಕ್ಕೆ ಏರಿಕೆಯಾಗಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 32,951 ಕ್ಕೆ ಏರಿಕೆಯಾಗಿದೆ. 

ಚಿತ್ರದುರ್ಗ 55, ಚಳ್ಳಕೆರೆ 30,ಹಿರಿಯೂರು 25,ಹೊಳಲ್ಕೆರೆ 31,ಹೊಸದುರ್ಗ 50,ಮೊಳಕಾಲ್ಮುರು ತಾಲ್ಲೂಕಿನ 9 ಪ್ರಕರಣಗಳು ಸೇರಿದಂತೆ ಒಟ್ಟು 200 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಸೋಮವಾರ 871 ಜನರು ಗುಣಮುಖರಾಗಿ ಒಟ್ಟು 27387 ಜನರು ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 5406 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಂಗನಾಥ್ ತಿಳಿಸಿದ್ದಾರೆ.

No comments:

Post a Comment

Featured post

148 ವರ್ಷಗಳ ನಂತರ, 10 ಜೂನ್ 2021 ರ ಮೊದಲ ಸೂರ್ಯಗ್ರಹಣ!!,

ಸಮಗ್ರ ಸುದ್ದಿ ಸ್ಪೇಷಲ್ : ಅಪರೂಪದ ಖಗೋಳ ವಿದ್ಯಾಮಾನದ ಕುರಿತಾಗಿ ವಿಶೇಷ ಲೇಖನ, ನವೀನ್.ಪಿ.ಆಚಾರ್ , ಸಹ ಕಾರ್ಯದರ್ಶಿ , ಚಿತ್ರದುರ್ಗ ವಿಜ್ಞಾನ ಕೇಂದ್ರ.  ಗ್ರಹಣ ಎಂದಾಕ...