Thursday, 3 June 2021

ಕನ್ನಡ ಕೊಳಕು ಭಾಷೆ ಎಂದು ಬಿಂಬಿಸಿದ್ದ ಗೂಗಲ್ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ರಾಜ್ಯ ಸರ್ಕಾರ


 ಬೆಂಗಳೂರು, ಜೂನ್ 03: ಕನ್ನಡ ಕೊಳಕು ಭಾಷೆ ಎಂದು ಬಿಂಬಿಸಿದ್ದ ಗೂಗಲ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.

ಕನ್ನಡವನ್ನು ಕೆಟ್ಟ ಭಾಷೆಯೆಂದು ಬಿಂಬಿಸಿದ ಗೂಗಲ್ ಸಂಸ್ಥೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ್ ಲಿಂಬಾವಳಿ ಹೇಳಿದ್ದಾರೆ.

ಕನ್ನಡ ಭಾಷೆ ಎರಡು ಸಾವಿರ ವರ್ಷಗಳಿಗೂ ಹೆಚ್ಚಿನ ಇತಿಹಾಸ ಹೊಂದಿದೆ. ಭಾರತದ ಶಾಸ್ತ್ರೀಯ ಭಾಷೆ ಎಂಬ ಹೆಗ್ಗಳಿಕೆ ಪಡೆದಿರುವ ಭಾಷೆಯ ಬಗ್ಗೆ ಕೀಳಾಗಿ ಮಾತಾಡಿದರೂ ಅದನ್ನು ಸಹಿಸಲಾಗುವುದಿಲ್ಲ, ಸದ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಅವರಿಗೆ ಈ ಸಂಬಂಧ ಕಾನೂನು ಇಲಾಖೆಯ ಜೊತೆಗೂಡಿ ಚರ್ಚಿಸಿ ಕೂಡಲೇ ಗೂಗಲ್‌ಗೆ ನೋಟಿಸ್ ನೀಡಲು ಸೂಚಿಸಿದ್ದೇನೆ ಎಂದು ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು.

ಭಾರತದ ಕೆಟ್ಟ ಭಾಷೆ ಯಾವುದು ಎಂದು ನೆಟ್ಟಿಗರು ಗೂಗಲ್ ನಲ್ಲಿ ಪ್ರಶ್ನೆ ಮಾಡಿದರೆ ಕನ್ನಡ ಎಂಬ ಉತ್ತರ ಬರುತ್ತಿತ್ತು. ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಅರವಿಂದ ಲಿಂಬಾವಳಿ, ಇದು ಅತ್ಯಂತ ಖಂಡನೀಯ ಸಂಗತಿ. ಗೂಗಲ್ ಆಗಲಿ ,ಬೇರೆ ಯಾರೇ ಆಗಲಿ ಕನ್ನಡ ಭಾಷೆ ಬಗ್ಗೆ ಗೌರವವಿಲ್ಲದೆ ವರ್ತಿಸಿದರೆ ಅಥವಾ ಕನ್ನಡಕ್ಕೆ ಅಪಮಾನ ಎಸಗಿದರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು.

2 ಸಾವಿರ ವರ್ಷಗಳ ಇತಿಹಾಸ ಇರುವ ಸುಂದರ, ಪ್ರಾಚೀನ ಕನ್ನಡ ಭಾಷೆಗೆ ಗೂಗಲ್ ಅವಮಾನ ಮಾಡಿದೆ. ಕನ್ನಡ ಭಾಷೆಗೆ ಮತ್ತು ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ತರುವಂತಹ ಘಟನೆಗೆ ಕನ್ನಡೊಗರು ಆಕ್ರೋಶ ವ್ಯಕ್ತಪಡಿಸಿದ್ದು, ಕನ್ನಡವನ್ನು ಕೊಳಕು ಭಾಷೆ ಎಂದು ತೋರಿದ ಗೂಗಲ್ ವಿರುದ್ದ ತಿರುಗಿಬಿದ್ದಿದ್ದರು

. ಇದಕ್ಕೆ ಎಚ್ಚೆತ್ತಿರುವ ಗೂಗಲ್ ತನ್ನ ತಪ್ಪು ತಿದ್ದಿಕೊಂಡಿದೆ. ಭಾರತದಲ್ಲಿ ಕೊಳಕು ಭಾಷೆ ಎಂಬುದಿಲ್ಲ. ಎಲ್ಲಾ ಭಾಷೆಗಳಿಗೆ ಗೌರವಿದೆ. ಕನ್ನಡ ಭಾಷೆ ಕರ್ನಾಟಕದ ಹೆಮ್ಮೆ ಎಂದು ಸ್ಪಷ್ಟನೆ ನೀಡಿದೆ.

ಗೂಗಲ್‌ನಲ್ಲಿ ಬೆಳಗ್ಗೆವರೆಗೆ ಭಾರತದ ಅತ್ಯಂತ ಕೊಳಕು ಭಾಷೆ ಎಂದು ಟೈಪ್ ಮಾಡಿದರೆ,ಆರೂವರೆ ಕೋಟಿ ಕನ್ನಡಿಗರು ಮಾತನಾಡುವ ಭಾಷೆ ಕನ್ನಡ ಎಂದು ಬರುತ್ತಿತ್ತು. ಇದಕ್ಕೆ ಕಾರಣ ಸರ್ಚ್ ಮಾಡಿದಾಗ debtconsolidationsquad.com ಎಂಬ ಜಾಲತಾಣದಲ್ಲಿ ಕಂಡು ಬಂದಿದ್ದ ಲೇಖನ, ಸದ್ಯ ಈ ವೆಬ್‌ಸೈಟ್‌ನನ್ನೆ ಗೂಗಲ್ ತೆಗೆದುಹಾಕಿದೆ.

No comments:

Post a Comment

Featured post

148 ವರ್ಷಗಳ ನಂತರ, 10 ಜೂನ್ 2021 ರ ಮೊದಲ ಸೂರ್ಯಗ್ರಹಣ!!,

ಸಮಗ್ರ ಸುದ್ದಿ ಸ್ಪೇಷಲ್ : ಅಪರೂಪದ ಖಗೋಳ ವಿದ್ಯಾಮಾನದ ಕುರಿತಾಗಿ ವಿಶೇಷ ಲೇಖನ, ನವೀನ್.ಪಿ.ಆಚಾರ್ , ಸಹ ಕಾರ್ಯದರ್ಶಿ , ಚಿತ್ರದುರ್ಗ ವಿಜ್ಞಾನ ಕೇಂದ್ರ.  ಗ್ರಹಣ ಎಂದಾಕ...