Wednesday, 23 June 2021

ಕಾಂಗ್ರೆಸ್ ನಲ್ಲಿ ಕುರ್ಚಿಗಾಗಿ ಕಚ್ಚಾಟ ಶುರುವಾಗಿದೆ: ಸಚಿವ ಶ್ರೀರಾಮುಲು.

ಚಿತ್ರದುರ್ಗ: ಕಾಂಗ್ರೆಸ್ ನಲ್ಲಿ ಕುರ್ಚಿಗಾಗಿ ಕಚ್ಚಾಟ ಆರಂಭವಾಗಿದೆ. ಆದರೆ ಕೈ ನಾಯಕರು ಬಿಜೆಪಿಯಲ್ಲಿ ಕುರ್ಚಿಗಾಗಿ ಕಿತ್ತಾಟ ಎಂದು ಆರೋಪ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ.

ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಅಧಿಕಾರ ಕಳೆದುಕೊಂಡು ಕಾಂಗ್ರೆಸ್ ನಾಯಕರಿಗೆ ಬುದ್ಧಿಭ್ರಮಣೆಯಾಗಿದೆ. ಸಿದ್ದರಾಮಯ್ಯ ಮತ್ತೆ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ. ಸಿಎಂ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಭವಿಷ್ಯ ಹೇಳ್ತಾರಾ? ತಾಕತ್ತಿದ್ದರೆ ಕಾಂಗ್ರೆಸ್ ನಲ್ಲಿ ಸಿಎಂ ಅಭ್ಯರ್ಥಿ ಘೋಷಿಸಲಿ. ಡಿ.ಕೆ.ಶಿವಕುಮಾರ್ ಅಥವಾ ಸಿದ್ದರಾಮಯ್ಯ ಇವರಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂದು ಹೇಳಲಿ ಎಂದು ಸವಾಲು ಹಾಕಿದರು.

ಇದೇ ವೇಳೆ ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ವಿಚಾರವಾಗಿ ಪ್ರತಿಕ್ರಿಯಿಸಿದ ಶ್ರೀರಾಮುಲು, ಈ ಬಗ್ಗೆ ಪಕ್ಷ ತೀರ್ಮಾನಿಸುತ್ತೆ. ಸಿಡಿ ಕೇಸ್ ವಿಚಾರವಾಗಿ ಅವರ ವಿರುದ್ಧ ತನಿಖೆ ನಡೆಯುತ್ತಿದೆ. ನಮ್ಮ ಸರ್ಕಾರ ಧರ್ಮ ಬಿಟ್ಟು ಅಧರ್ಮಕ್ಕೆ ಸಹಕರಿಸಲ್ಲ ಕಾನೂನು ಚೌಕಟ್ಟಿನಲ್ಲಿ ತನಿಖೆ ನಡೆಯುತ್ತಿದೆ ಎಂದರು.


No comments:

Post a Comment

Featured post

148 ವರ್ಷಗಳ ನಂತರ, 10 ಜೂನ್ 2021 ರ ಮೊದಲ ಸೂರ್ಯಗ್ರಹಣ!!,

ಸಮಗ್ರ ಸುದ್ದಿ ಸ್ಪೇಷಲ್ : ಅಪರೂಪದ ಖಗೋಳ ವಿದ್ಯಾಮಾನದ ಕುರಿತಾಗಿ ವಿಶೇಷ ಲೇಖನ, ನವೀನ್.ಪಿ.ಆಚಾರ್ , ಸಹ ಕಾರ್ಯದರ್ಶಿ , ಚಿತ್ರದುರ್ಗ ವಿಜ್ಞಾನ ಕೇಂದ್ರ.  ಗ್ರಹಣ ಎಂದಾಕ...