Thursday, 10 June 2021

ಬೆಂಗಳೂರಿನಲ್ಲಿ ಕೆಲವೇ ಗಂಟೆಗಳಲ್ಲಿ ಮಳೆ ಮುನ್ಸೂಚನೆ


 ಬೆಂಗಳೂರು, ಜೂನ್ 10: ನಗರದಲ್ಲಿ ಗುರುವಾರ ಮಿಂಚು ಗುಡುಗು ಸಹಿತ ಮಳೆಯಾಗುವುದಾಗಿ ಬೆಂಗಳೂರು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂದಿನ ಮೂರು ಗಂಟೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಿ ಮಳೆ ಆರಂಭವಾಗುವುದು ಎಂದು ಕೇಂದ್ರ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ ಮಳೆಯಾಗುವ ಮೂಲಕ ರಾಜ್ಯಕ್ಕೆ ಮುಂಗಾರು ಮಳೆ ಆಗಮನವನ್ನು ಸೂಚಿಸಿತ್ತು.


ಈ ಬಾರಿ ಮುಂಗಾರು ಸಾಮಾನ್ಯವಾಗಿರಲಿದ್ದು, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಆಂಧ್ರ ಪ್ರದೇಶ, ತೆಲಂಗಾಣ, ತಮಿಳುನಾಡಿನಲ್ಲಿ ಮಳೆಯಾಗುವುದಾಗಿ ಇಲಾಖೆ ಮುನ್ಸೂಚನೆ ನೀಡಿತ್ತು.ಮೇ ತಿಂಗಳಿನಲ್ಲಿ ಬೆಂಗಳೂರಿನಲ್ಲಿ 128 ಎಂಎಂ ಮಳೆಯಾಗಿತ್ತು. ಜೂನ್ ತಿಂಗಳಿನಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯ ಮಳೆಯಾಗಲಿದ್ದು, ತಿಂಗಳಿಗೆ 89 ಎಂಎಂ ಮಳೆಯಾಗುವುದಾಗಿ ಈ ಹಿಂದೆ ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿತ್ತು.



ಜೂನ್‌ ತಿಂಗಳಿನಿಂದ ಸೆಪ್ಟೆಂಬರ್ ತಿಂಗಳವರೆಗೆ ಮುಂಗಾರು ಮಳೆಯಾಗಲಿದ್ದು, ಈ ವರ್ಷ ಮಳೆ ಸಾಮಾನ್ಯವಾಗಿರುವುದಾಗಿ ಹವಾಮಾನ ಇಲಾಖೆ ವರದಿ ನೀಡಿದೆ. ನೈಋತ್ಯ ಮುಂಗಾರು ದಕ್ಷಿಣ ಭಾರತ ಹಾಗೂ ಉತ್ತರ ಭಾರತದಲ್ಲಿ ಸಾಮಾನ್ಯ ರೀತಿಯಲ್ಲಿರಲಿದ್ದು ಕೇಂದ್ರ ಭಾಗದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಇರಲಿದೆ ಎಂದು ತಿಳಿಸಿದೆ.

No comments:

Post a Comment

Featured post

148 ವರ್ಷಗಳ ನಂತರ, 10 ಜೂನ್ 2021 ರ ಮೊದಲ ಸೂರ್ಯಗ್ರಹಣ!!,

ಸಮಗ್ರ ಸುದ್ದಿ ಸ್ಪೇಷಲ್ : ಅಪರೂಪದ ಖಗೋಳ ವಿದ್ಯಾಮಾನದ ಕುರಿತಾಗಿ ವಿಶೇಷ ಲೇಖನ, ನವೀನ್.ಪಿ.ಆಚಾರ್ , ಸಹ ಕಾರ್ಯದರ್ಶಿ , ಚಿತ್ರದುರ್ಗ ವಿಜ್ಞಾನ ಕೇಂದ್ರ.  ಗ್ರಹಣ ಎಂದಾಕ...