Thursday, 3 June 2021

ಪಾಟ್ನಾ ಏಮ್ಸ್ ನಲ್ಲಿ ಮಕ್ಕಳ ಮೇಲೆ ಕೋವಾಕ್ಸಿನ್​ನ ಕ್ಲಿನಿಕಲ್​ ಪ್ರಯೋಗ ಆರಂಭ


 ಪಾಟ್ನಾ : ದೇಶದಲ್ಲಿ ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚು ಬಾಧಿಸುತ್ತದೆ ಎಂಬ ಆತಂಕ ಮೂಡಿದ್ದು, ಇದೀಗ ಭಾರತ್ ಬಯೋಟೆಕ್ ತಯಾರಿಸಿದ ಕೋವಿಡ್​-19 ಲಸಿಕೆಯಾದ ಕೋವಾಕ್ಸಿನ್​ನ ಕ್ಲಿನಿಕಲ್​ ಪ್ರಯೋಗಗಳನ್ನು ಮಕ್ಕಳ ಮೇಲೆ ನಡೆಸಲು ಪಾಟ್ನಾದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಮುಂದಾಗಿದೆ.

2ರಿಂದ 18 ವರ್ಷದೊಳಗಿನ ಮಕ್ಕಳ ಮೇಲೆ ಕೋವಾಕ್ಸಿನ್​ನ 2 ಮತ್ತು 3ನೇ ಹಂತದ ಕ್ಲಿನಿಕಲ್ ಪ್ರಯೋಗಕ್ಕೆ ಮೇ 11ರಂದು ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಅನುಮೋದನೆ ನೀಡಿತ್ತು.

ಕೊರೊನಾ ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿರುವ ಹಿನ್ನೆಲೆ ದೇಶದಲ್ಲಿ ಮಕ್ಕಳಿಗೆ ಆದಷ್ಟು ಬೇಗ ವ್ಯಾಕ್ಸಿನೇಷನ್​ ಆರಂಭಿಸುವುದು ಅಗತ್ಯವಿದೆ.

ಅಮೆರಿಕದಲ್ಲಿ ಈಗಾಗಲೇ ಫೈಜರ್ ಹಾಗೂ ಬಯೋಎನ್​ಟೆಕ್‌ ಸಂಸ್ಥೆ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ಕೋವಿಡ್ ಲಸಿಕೆಯನ್ನು 12ರಿಂದ 15 ವರ್ಷ ವಯಸ್ಸಿನ ಮಕ್ಕಳಿಗೆ ನೀಡಲಾಗುತ್ತಿದೆ.

No comments:

Post a Comment

Featured post

148 ವರ್ಷಗಳ ನಂತರ, 10 ಜೂನ್ 2021 ರ ಮೊದಲ ಸೂರ್ಯಗ್ರಹಣ!!,

ಸಮಗ್ರ ಸುದ್ದಿ ಸ್ಪೇಷಲ್ : ಅಪರೂಪದ ಖಗೋಳ ವಿದ್ಯಾಮಾನದ ಕುರಿತಾಗಿ ವಿಶೇಷ ಲೇಖನ, ನವೀನ್.ಪಿ.ಆಚಾರ್ , ಸಹ ಕಾರ್ಯದರ್ಶಿ , ಚಿತ್ರದುರ್ಗ ವಿಜ್ಞಾನ ಕೇಂದ್ರ.  ಗ್ರಹಣ ಎಂದಾಕ...