Friday, 11 June 2021

BREAKING NEWS: ಇನ್ನೂ 2 ವರ್ಷ ನಾನೇ ಸಿಎಂ, ಎಂದ ರಾಜಹುಲಿ.


 ಹಾಸನ: ರಾಜ್ಯದಲ್ಲಿ ಇನ್ನೂ ಎರಡು ವರ್ಷ ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರೇ ಈ ಬಗ್ಗೆ ಸ್ಪಷ್ಟನೆ ನೀಡಿರುವಾಗ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಮ್ಮ ವಿರೋಧಿ ಬಣಕ್ಕೆ ತಿರುಗೇಟು ನೀಡಿದ್ದಾರೆ.


 ಹಾಸನದಲ್ಲಿ ಮಾತನಾಡಿದ ಸಿಎಂ ಬಿ.ಎಸ್.ವೈ, ಇನ್ನೂ ಎರಡು ವರ್ಷ ನಾನೇ ಸಿಎಂ ಆಗಿರುತ್ತೇನೆ. ಈ ಬಗ್ಗೆ ಜನರಿಗೆ ಭರವಸೆ ನೀಡುತ್ತಿದ್ದೇನೆ. ನನ್ನ ನೇತೃತ್ವದಲ್ಲಿ ರಾಜ್ಯದಲ್ಲಿ ಉತ್ತಮ ಕೆಲಸಗಳಾಗಿವೆ. ಯಡಿಯೂರಪ್ಪನವರೇ ಸಿಎಂ ಆಗಿ ಪೂರ್ಣಾವಧಿ ಮುಗಿಸಬೇಕು ಎಂದು ಅರುಣ್ ಸಿಂಗ್ ಹೇಳಿದ್ದಾರೆ. ಹೀಗಾಗಿ ನನ್ನ ಜವಾಬ್ದಾರಿ ಇನ್ನೂ ಹೆಚ್ಚಾಗಿದೆ. ರಾಜ್ಯದಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ಜನರ ವಿಶ್ವಾಸ ಉಳಿಸಿಕೊಳ್ಳುತ್ತೇನೆ ಎಂದರು.


ಪ್ರಧಾನಿ ಮೋದಿ, ಅಮಿತ್ ಶಾ ಅವರಿಗೂ ನನ್ನ ಮೇಲೆ ವಿಶ್ವಾಸವಿದೆ. ಈ ನಿಟ್ಟಿನಲ್ಲಿ ನಾನು ರಾಜ್ಯದಲ್ಲಿ ಇನ್ನೂ ಹೆಚ್ಚಿನ ಜನಪರ ಕೆಲಸಗಳನ್ನು ಮಾಡಬೇಕು. ಅರುಣ್ ಸಿಂಗ್ ರಾಜ್ಯ ಉಸ್ತುವಾರಿಯಾಗಿರುವುದರಿಂದ ಜೂನ್ 16ಕ್ಕೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ನಾಯಕತ್ವ ಬದಲಾವಣೆ ವಿಚಾರವಾಗಿ ಯಾವುದೇ ಗೊಂದಲಗಳೂ ಇಲ್ಲ ಎಂದು ಹೇಳಿದರು.


No comments:

Post a Comment

Featured post

148 ವರ್ಷಗಳ ನಂತರ, 10 ಜೂನ್ 2021 ರ ಮೊದಲ ಸೂರ್ಯಗ್ರಹಣ!!,

ಸಮಗ್ರ ಸುದ್ದಿ ಸ್ಪೇಷಲ್ : ಅಪರೂಪದ ಖಗೋಳ ವಿದ್ಯಾಮಾನದ ಕುರಿತಾಗಿ ವಿಶೇಷ ಲೇಖನ, ನವೀನ್.ಪಿ.ಆಚಾರ್ , ಸಹ ಕಾರ್ಯದರ್ಶಿ , ಚಿತ್ರದುರ್ಗ ವಿಜ್ಞಾನ ಕೇಂದ್ರ.  ಗ್ರಹಣ ಎಂದಾಕ...