Friday 11 June 2021

Breaking: ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ಪರೀಕ್ಷೆ


 ಬೆಂಗಳೂರು: ರಾಜ್ಯದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದ್ದು, ಆನ್ ಲೈನ್ ಮೂಲಕ ಪರೀಕ್ಷೆ ನಡೆಸಲಾಗುವುದು ಎಂದು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.

 

ಎಲ್ಲಾ ಕಾಲೇಜುಗಳಿಗೆ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಆನ್‌ಲೈನ್ ಪರೀಕ್ಷೆ ನಡೆಸಲು ತೀರ್ಮಾನಿಸಿರುವುದಾಗಿ ತಿಳಿಸಿದೆ. ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಎರಡು ವಿಷಯಗಳಿಗೆ ಪರೀಕ್ಷೆ ನೀಡಲು ಸೂಚನೆ ನೀಡಲಾಗಿದೆ.

 

ಈ ಹಿಂದೆ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಪಾಸ್ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಿಸಿದ್ದರು. ಆದರೆ ಇದೀಗ ಆನ್‌ಲೈನ್ ಪರೀಕ್ಷೆ ಕಡ್ಡಾಯ ಎಂದು ತಿಳಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆಯನ್ನು ನಡೆಸುವುದಿಲ್ಲ. ಆದರೆ ಪ್ರಥಮ ಪಿಯುಸಿಗೆ ಪರೀಕ್ಷೆ ನಡೆಸಲಾಗುವುದು ಎಂದು ಇಲಾಖೆ ತಿಳಿಸಿದೆ. ಪಿಯು ಬೋರ್ಡ್, ಎರಡು ಮಾದರಿಯ ಪ್ರಶ್ನೆ ಪತ್ರಿಕೆ ರೂಪಿಸಿದ್ದು, ಪಿಯು ಬೋರ್ಡ್ ವೆಬ್‌ಸೈಟ್‌ನಲ್ಲಿ ಮಾದರಿ ಪ್ರಶ್ನೆ ಪತ್ರಿಕೆ ಲಭ್ಯವಿರಲಿದೆ.

 

ಆನ್‌ಲೈನ್ ಪರೀಕ್ಷೆ ಹೇಗೆ ನಡೆಯುತ್ತದೆ?

ಇಲಾಖೆಯ ವೆಬ್‌ಸೈಟ್‌ನಲ್ಲಿರುವ ಪ್ರಶ್ನೆ ಪತ್ರಿಕೆಯನ್ನು ವಿದ್ಯಾರ್ಥಿಗಳು ಡೌನ್‌ಲೋಡ್ ಮಾಡಿಕೊಂಡು ಉತ್ತರ ಬರೆದು ವಾಟ್ಸ್‌ಆಪ್, ಇಮೇಲ್ ಅಂಚೆ ಮೂಲಕ ಉಪನ್ಯಾಸಕರಿಗೆ ಉತ್ತರ ಪತ್ರಿಕೆ ಕಳುಹಿಸಬೇಕು.

 

ಉಪನ್ಯಾಸಕರು ಏನು ಮಾಡಬೇಕು?

ವಿದ್ಯಾರ್ಥಿಗಳು ಕಳುಹಿಸಿದ ಉತ್ತರ ಪತ್ರಿಕೆಗಳನ್ನು ಉಪನ್ಯಾಸಕರು ಮೌಲ್ಯಮಾಪನ ಮಾಡಿ Students Achievement Tracking System ನಲ್ಲಿ ಫಲಿತಾಂಶವನ್ನು ಅಪ್‌ಲೋಡ್ ಮಾಡಬೇಕು.

 

ಅಸೆಸ್ಮೆಂಟ್ ವಿಧದಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಮೊದಲ ಅಸೆಸ್ಮೆಂಟ್‌ಗೆ ಜೂನ್ 20 ಕೊನೆಯ ದಿನವಾಗಿದ್ದು, ಉಪನ್ಯಾಸಕರು ಜೂನ್ 25ರೊಳಗೆ ಮೌಲ್ಯಮಾಪನ ಮಾಡುವಂತೆ ಸೂಚಿಸಲಾಗಿದೆ. ಎರಡನೇ ಅಸೆಸ್ಮೆಂಟ್‌ಗೆ ಜೂನ್ 26 ಕೊನೆ ದಿನವಾಗಿದ್ದು, ಜುಲೈ 5ರ ಒಳಗೆ ಮೌಲ್ಯಮಾಪನ ನಡೆಸಲಾಗುತ್ತದೆ.

No comments:

Post a Comment