Wednesday, 9 June 2021

Covid-19 India Update: 92,596 ಹೊಸ ಪ್ರಕರಣ, 2,219 ಸೋಂಕಿತರು ಸಾವು


 ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 92,596 ಹೊಸ ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ 2,219 ಸೋಂಕಿತರು ಮೃತಪಟ್ಟಿದ್ದಾರೆ ಮತ್ತು 1,62,664 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಈವರೆಗೆ ಒಟ್ಟು 2,90,89,069 ಪ್ರಕರಣಗಳು ಬೆಳಕಿಗೆ ಬಂದಿದ್ದು, 3,53,528 ಮಂದಿ ಸಾವಿಗೀಡಾಗಿದ್ದಾರೆ.

ಒಟ್ಟು 2,75,04,126 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, 12,31,415 ಸಕ್ರಿಯ ಪ್ರಕರಣಗಳಿವೆ. ಈವರೆಗೆ 23.90 (23,90,58,360) ಕೋಟಿಗೂ ಅಧಿಕ ಜನರಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.


ಏ. 25ರ ಹೊತ್ತಿಗೆ ದೇಶದಲ್ಲಿ 37,01,93,563 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಶನಿವಾರ ಒಂದೇ ದಿನ 19,85,967 ಮಾದರಿಗಳು ಪರೀಕ್ಷೆಗೆ ಒಳಪಟ್ಟಿವೆ ಎಂದು ಭಾರತೀಯ ವೈದ್ಯಕೀಯ ಅಧ್ಯಯನ ಸಂಸ್ಥೆ (ಐಸಿಎಂಆರ್‌) ತಿಳಿಸಿದೆ.




No comments:

Post a Comment

Featured post

148 ವರ್ಷಗಳ ನಂತರ, 10 ಜೂನ್ 2021 ರ ಮೊದಲ ಸೂರ್ಯಗ್ರಹಣ!!,

ಸಮಗ್ರ ಸುದ್ದಿ ಸ್ಪೇಷಲ್ : ಅಪರೂಪದ ಖಗೋಳ ವಿದ್ಯಾಮಾನದ ಕುರಿತಾಗಿ ವಿಶೇಷ ಲೇಖನ, ನವೀನ್.ಪಿ.ಆಚಾರ್ , ಸಹ ಕಾರ್ಯದರ್ಶಿ , ಚಿತ್ರದುರ್ಗ ವಿಜ್ಞಾನ ಕೇಂದ್ರ.  ಗ್ರಹಣ ಎಂದಾಕ...