Sunday, 20 June 2021

Education: ಪಿಯುಸಿ ಜುಲೈ 15 ರಿಂದ ಶೈಕ್ಷಣಿಕ ವರ್ಷಾರಂಭ.

ಬೆಂಗಳೂರು : ರಾಜ್ಯದಲ್ಲಿ ಜುಲೈ 15 ರಿಂದ ಪಿಯು ಶೈಕ್ಷಣಿಕ ವರ್ಷ ಆರಂಭವಾಗಲಿದ್ದು, ಮೊದಲ ಹಂತದಲ್ಲಿ ಆನ್ ಲೈನ್ ಮೂಲಕ ತರಗತಿಗಳನ್ನು ಶುರು ಮಾಡಲು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ಧರಿಸಿದೆ.

ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 15 ರಿಂದ ಆನ್ ಲೈನ್ ತರಗತಿಗಳು ಪ್ರಾರಂಭ ಮಾಡಲು ನಿರ್ಧರಿಸಲಾಗಿದ್ದು, ಭೌತಿಕ ತರಗತಿ ಆರಂಭ ವಿಚಾರವಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಜುಲೈ ಅಂತ್ಯದ ವೇಳೆಗೆ ಭೌತಿಕ ತರಗತಿಗಳು ಆರಂಭವಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ನಡೆಯಬೇಕಿದ್ದ ಪಿಯು ಪರೀಕ್ಷೆಯನ್ನು ಸರ್ಕಾರ ರದ್ದುಗೊಳಿಸಿದೆ. ಎಸ್‌ಎಸ್‌ಎಲ್ ಸಿ ಮತ್ತು ಪ್ರಥಮ ಪಿಯು ಅಂಕಗಳನ್ನು ಅವಲೋಕಿಸಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಅಂಕವನ್ನು ನೀಡಲು ನಿರ್ಧರಿಸಲಾಗಿದೆ.

ಪ್ರಥಮ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಮೊದಲು ಆನ್ ಲೈನ್ ಮೂಲಕ ಶಿಕ್ಷಣ ನೀಡಲಾಗುವುದು. ಕೊರೊನಾ ಸ್ಥಿತಿಗತಿ ನೋಡಿಕೊಂಡು ಭೌತಿಕ ತರಗತಿಗಳ ಪ್ರಾರಂಭಕ್ಕೆ ಚಿಂತನೆ ನಡೆಸಲಾಗುವುದು. ಸರ್ಕಾರ ಗ್ರೀನ್ ಸಿಗ್ನಲ್ ನೀಡಿದರೆ ಜುಲೈ ಕೊನೆಯ ವಾರದಿಂದಲೇ ಭೌತಿಕ ತರಗತಿಗಳನ್ನು ಆರಂಭವಾಗುವ ಸಾಧ್ಯತೆ ಇದೆ.


No comments:

Post a Comment

Featured post

148 ವರ್ಷಗಳ ನಂತರ, 10 ಜೂನ್ 2021 ರ ಮೊದಲ ಸೂರ್ಯಗ್ರಹಣ!!,

ಸಮಗ್ರ ಸುದ್ದಿ ಸ್ಪೇಷಲ್ : ಅಪರೂಪದ ಖಗೋಳ ವಿದ್ಯಾಮಾನದ ಕುರಿತಾಗಿ ವಿಶೇಷ ಲೇಖನ, ನವೀನ್.ಪಿ.ಆಚಾರ್ , ಸಹ ಕಾರ್ಯದರ್ಶಿ , ಚಿತ್ರದುರ್ಗ ವಿಜ್ಞಾನ ಕೇಂದ್ರ.  ಗ್ರಹಣ ಎಂದಾಕ...