ಬೆಂಗಳೂರು : ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೂ ಪರೀಕ್ಷೆ ನಡೆಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕೊರೊನಾ ಭೀತಿ ಹಿನ್ನೆಲೆ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ವಿಚಾರಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು.
'ಶಿಕ್ಷಣ ಸಚಿವ ಸುರೇಶ್ ಕುಮಾರ್ ಪಾಪ..ಅವರಿಗೆ ಪಾಪ ಎನ್ನಬೇಕೋ.. ಏನ್ ಅನ್ನಬೇಕೋ ಗೊತ್ತಿಲ್ಲ.ಅವರದ್ದು ಸ್ವಂತ ಅಭಿಪ್ರಾಯ ಯಾವುದ್ದೂ ಇರಲ್ಲ..ಪಿಯಸಿ ಪರೀಕ್ಷೆ ಮುಂದಕ್ಕೆ ಹಾಕುತ್ತಾರೆ, ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸುತ್ತಾರೆ, ನನ್ನ ಪ್ರಕಾರ ಇದು ಸರಿಯಲ್ಲ..ಇವುಗಳಲ್ಲಿ ಯಾವುದು ಮುಖ್ಯ.?
ನನ್ನ ಪ್ರಕಾರ ಎಸ್ ಎಸ್ ಎಲ್ ಸಿ, ಪಿಯುಸಿ ಹಾಗೂ ಸಿಇಟಿ ಪರೀಕ್ಷೆ ನಡೆಸಬೇಕಿತ್ತು, ಸರ್ಕಾರ ಮುಂಚೆಯೇ ಇದಕ್ಕೆ ಸಿದ್ದತೆ ಮಾಡಿಕೊಳ್ಳಬೇಕಿತ್ತು ಎಂದು ಹೇಳಿದರು
No comments:
Post a Comment