ಬೆಂಗಳೂರು: ಕೇಂದ್ರ ಸರ್ಕಾರ ಸಿಬಿಎಸ್‌ಇ 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನ ರದ್ದುಗೊಳಿಸಿದ್ದು, ರಾಜ್ಯದಲ್ಲಿಯೂ ರದ್ದುಗೊಳಿಸುವಂತೆ ಒತ್ತಡ ಎರಲಾಗ್ತಿದೆ. ಈ ಕುರಿತು ಶೀಘ್ರ ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದ್ದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವ್ರು ನಾಳೆ 10 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.
ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆಗಳ ಸಂಬಂಧ ನಾಳೆ 04.06.2021ರಂದು ಬೆಳಗ್ಗೆ 10 ಗಂಟೆಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾದ ಎಸ್.ಸುರೇಶ್ ಕುಮಾರ್ ಅವರು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅದ್ರಂತೆ, ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವೀತಿಯ ಪಿಯುಸಿ ಪರೀಕ್ಷೆ ನಡೆಸಲಾಗುತ್ತಾ ಅಥವಾ ರದ್ದುಗಳಿಸಲಾಗುತ್ತಾ ಅನ್ನೋ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ.

No comments:
Post a Comment