ನವ ದೆಹಲಿ: ಮಾರಣಾಂತಿಕ ಕೊರೋನಾ ವೈರಸ್ ಭೀತಿಯ ನಡುವೆ ಪರೀಕ್ಷೆ ನಡೆಸುವುದು ಹೇಗೆ? ಎಂಬುದು ಎಲ್ಲಾ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಕ್ಕೆ ತಲೆನೋವಿನ ಸಂಗತಿಯಾಗಿತ್ತು. ಈ ನಡುವೆ ಈ ವರ್ಷ ನೀಟ್ ಪರೀಕ್ಷೆಗಳನ್ನೂ ನಡೆಸಲೇಬೇಕು ಎಂಬ ನಿರ್ಧಾರಕ್ಕೂ ಕೇಂದ್ರ ಸರ್ಕಾರ ಮುಂದಾಗಿದೆ. ಹೀಗಾಗಿ ಕೋವಿಡ್ ನಿಯಮಗಳ ಅನ್ವಯ ಸೆಪ್ಟೆಂಬರ್ 12 ರಂದು ನೀಟ್ ಯುಜಿ-2021 ಪರೀಕ್ಷೆ ನಡೆಯಲಿದೆ ಎಂದು ಕೇಂದ್ರ ಸರ್ಕಾರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ. ಆಸಕ್ತ ಅಭ್ಯರ್ಥಿಗಳು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ವೆಬ್‌ಸೈಟ್‌ನಲ್ಲಿ 2021 ರ ಜುಲೈ 13 ರ ಸಂಜೆ 5 ಗಂಟೆಯಿಂದ ಅರ್ಜಿ ಸಲ್ಲಿಸಲು ಪ್ರಾರಂಭಿಸಬಹುದಾಗಿದೆ.
"ಕೊರೋನಾ ಪ್ರೋಟೋಕಾಲ್‌ಗಳನ್ನು ಅನುಸರಿಸಿ 2021 ಸೆಪ್ಟೆಂಬರ್ 12 ರಂದು ದೇಶಾದ್ಯಂತ ನೀಟ್ ಯುಜಿ-2021 ನಡೆಯಲಿದೆ. ಅರ್ಜಿ ಪ್ರಕ್ರಿಯೆ ನಾಳೆ ಸಂಜೆ 5 ಗಂಟೆಯಿಂದ ಎನ್‌ಟಿಎ ವೆಬ್‌ಸೈಟ್ ಮೂಲಕ ಪ್ರಾರಂಭವಾಗಲಿದೆ" ಎಂದು ಧರ್ಮೇಂದ್ರ ಟ್ವೀಟ್ ಮಾಡಿದ್ದಾರೆ.
ಸಾಮಾಜಿಕ ಅಂತರದ ಮಾನದಂಡಗಳನ್ನು ಖಚಿತಪಡಿಸಲು
ಬೇಕಾಗಿ ಪರೀಕ್ಷೆಗಳನ್ನು ನಡೆಸುವ ನಗರಗಳ ಸಂಖ್ಯೆಯನ್ನು 155 ರಿಂದ 198 ಕ್ಕೆ ಹೆಚ್ಚಿಸಲಾಗಿದ್ದು,
ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನೂ ಹೆಚ್ಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.
2020 ರಲ್ಲಿ ವೈದ್ಯಕೀಯ ಪ್ರವೇಶ
ಪರೀಕ್ಷೆಗೆ ದೇಶಾದ್ಯಂತ 3862 ಕೇಂದ್ರಗಳು ಇದ್ದವು. ಪ್ರತಿ ವರ್ಷ
ಸುಮಾರು 15 ಲಕ್ಷ ಆಕಾಂಕ್ಷಿಗಳು ಪರೀಕ್ಷೆಗೆ ಹಾಜರಾಗುತ್ತಾರೆ.
No comments:
Post a Comment