Friday 2 July 2021

ಅನ್‍ ಲಾಕ್ 3.0 ಬೆನ್ನಲ್ಲೇ ಮತ್ತೆ ಉಲ್ಬಣಿಸಲಿದೆ ಕೊರೋನಾ : ತಜ್ಞರ ಎಚ್ಚರಿಕೆ!!

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಯಲಿದ್ದುಸೋಮವಾರದಿಂದ(ಜುಲೈ 5) ರಾಜ್ಯಾದ್ಯಂತ ಸಂಪೂರ್ಣ ಅನ್‍ಲಾಕ್ ಮಾಡುವ ಬಗ್ಗೆ ಈ ಸಭೆಯಲ್ಲಿ ನಿರ್ಣಯ ಕೈಗೊಳ್ಳುವ ನಿರೀಕ್ಷೆಗಳಿವೆ.


ಬೆಂಗಳೂರು, ಜು.2- ಅನ್ಲಾಕ್-3.0 ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದ್ದು, ಈ ನಡುವಲ್ಲೇ ಸೋಂಕು ಉಲ್ಬಣಗೊಳ್ಳುವ ಎಚ್ಚರಿಕೆಯನ್ನು ತಜ್ಞರು ನೀಡಿದ್ದಾರೆ. 

ರಾಜ್ಯ ಸರ್ಕಾರ ಈ ನಡೆ ಕುರಿತು ಮಾಹಿತಿಯಿಲ್ಲದ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ತಜ್ಞರು, ಪ್ರಸ್ತುತ ಪರಿಸ್ಥಿತಿಯಲ್ಲಿ ಎಲ್ಲಾ ಆರ್ಥಿಕ ಚಟುವಟಿಕೆಗಳಿಗೂ ಅವಕಾಶ ಮಾಡಿಕೊಡುವುದು ಸೂಕ್ತವಲ್ಲ. ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಸೋಂಕು ಉಲ್ಬಣಗೊಂಡಿದ್ದು, ಈ ಸಮಯದಲ್ಲಿ ಕಫ್ರ್ಯೂ ತೆಗೆದಿದ್ದೇ ಆದರೆ, ರಾಜ್ಯದಲ್ಲಿ ಸೋಂಕು ಉಲ್ಭಣಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದೆ. ತಜ್ಞರ ಸಮಿತಿಯು ರಾಜ್ಯ ಸರ್ಕಾರ ಇನ್ನೆರಡು ವಾರಗಳ ಕಾದು ಪರಿಸ್ಥಿತಿ ಆಧರಿಸಿ ನಿರ್ಧಾರ ಕೈಗೊಳ್ಳಬೇಕೆಂದು ಸಲಹೆ ನೀಡಿದ್ದಾರೆ.

ನಿಯಮಗಳನ್ನು ಸಂಪೂರ್ಣವಾಗಿ ಸಡಿಲಗೊಳಿಸುವುದಕ್ಕೂ ಮುನ್ನ ಸರ್ಕಾರ ಇನ್ನೆರಡು ವಾರಗಳ ಕಾಲ ಕಾದು ನೋಡಬೇಕಿದೆ. ಕನಿಷ್ಠ ಪಕ್ಷ ನೈಟ್ ಕಫ್ರ್ಯೂವನ್ನಾದರೂ ಮುಂದುವರೆಸಬೇಕು. ಕೊರೊನಾ ಮೊದಲನೇ ಹಾಗೂ ಎರಡನೇ ಅಲೆಯನ್ನು ಸೂಕ್ಷ್ಮವಾಗಿ ಗಮನಿಸಬೇಕಿದೆ. ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಸೋಂಕು ಉಲ್ಬಣಗೊಂಡ ನಾಲ್ಕು ವಾರಗಳ ಬಳಿಕ ರಾಜ್ಯದಲ್ಲಿಯೂ ಸೋಂಕು ಉಲ್ಬಣಗೊಂಡ ಬೆಳವಣಿಗೆಗಳು ಕಂಡು ಬಂದಿತ್ತು.

ರಾಜ್ಯಕ್ಕೆ ಹೆಚ್ಚೆಚ್ಚು ಜನರು ಬರುತ್ತಿದ್ದಾರೆ. ಹೀಗಾಗಿ ರಾಜ್ಯದಲ್ಲಿಯೂ ಸೋಂಕು ಉಲ್ಬಣಗೊಳ್ಳುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ. ಹೆಚ್ಚೆಚ್ಚು ಜನರು ಸೇರುವುದಕ್ಕೆ ಸರ್ಕಾರ ಅವಕಾಶ ಮಾಡಿಕೊಡಬಾರದು. ಸರ್ಕಾರ ಹೆಚ್ಚು ಸಮಯದವರೆಗೆ ವಾಣಿಜ್ಯ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಗದಿದ್ದರೂ, ವಾರಾಂತ್ಯದ ಲಾಕ್‍ಡೌನ್ ನ್ನು ಮುಂದುವರೆಸಬೇಕು ಎಂದು ತಜ್ಞರ ಸಮಿತಿಯು ಹೇಳಿದೆ.

ನಾವು ಆರ್ಥಿಕ ಚಟುವಟಿಕೆಗಳನ್ನು ಅತ್ಯಂತ ನಿಯಂತ್ರಿತ ರೀತಿಯಲ್ಲಿ ತೆರೆಯಬೇಕು ಮತ್ತು ಸಾಮಾಜಿಕ ಮತ್ತು ಮನರಂಜನಾ ಚಟುವಟಿಕೆಗಳನ್ನು ಈ ಸಂದರ್ಭದಲ್ಲಿ ಪ್ರೋತ್ಸಾಹಿಸಬಾರದು. ನೈಟ್ ಕಫ್ರ್ಯೂ ಮುಂದುವರಿಸಬಹುದು.ಜನರು ಕೊರೊನಾ ನಿಯಮಗಳನ್ನು ಮರೆಯಬಾರದು. ಜೀವನ ಮತ್ತು ಜೀವನೋಪಾಯ ಎರಡೂ ಕಡೆ ಗಮನಹರಿಸಬೇಕಿದೆ.

ಜೀವನೋಪಾಯಕ್ಕೆ ಜನರು ಹೊರಗೆ ಬರಲೇಬೇಕೆಂಬುದನ್ನು ನಾನು ಒಪ್ಪುತ್ತೇನೆ. ಆದರೆ, ಪ್ರತಿಯೊಬ್ಬ ನಾಗರಿಕನೂ ಕೊರೊನಾ ನಿಯಮವನ್ನು ಜವಾಬ್ದಾರಿಯುತವಾಗಿ ಪಾಲನೆ ಮಾಡಬೇಕು. ಇಲ್ಲದೇ ಹೋದಲ್ಲಿ ಮರಳಿ ಲಾಕ್‍ಡೌನ್ ಸಂಕಷ್ಟ ಅನುಭವಿಸಬೇಕಾಗುತ್ತದೆ ಎಂದು ಸಮಿತಿ ಆತಂಕವನ್ನು ವ್ಯಕ್ತಪಡಿಸಿದೆ.

 


No comments:

Post a Comment