Friday 2 July 2021

ಹಿರಿಯ ವಿಜ್ಞಾನಿ ಸುಧೀಂದ್ರ ಹಾಲ್ದೋಡ್ಡೇರಿ ಇನ್ನಿಲ್ಲ.


ಬೆಂಗಳೂರು: ವಿಜ್ಞಾನ ಬರಹಗಾರ, ಡಿಆರ್‌ಡಿಒ ಮಾಜಿ ವಿಜ್ಞಾನಿ ಸುಧೀಂದ್ರ ಹಾಲ್ದೊಡ್ಡೇರಿ (61) ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು.

ವಾರದ ಹಿಂದೆ ಅವರಿಗೆ ತೀವ್ರ ಹೃದಯಾಘಾತವಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಮೆದುಳಿಗೆ ಆಮ್ಲಜನಕ ಸರಬರಾಜು ಆಗುವುದು ನಿಂತಿದ್ದರಿಂದ ಅವರ ಮೆದುಳು ನಿಷ್ಕ್ರಿಯವಾಗಿ ಸಾವಿಗೀಡಾದರು ಎಂದು ಆಸ್ಪತ್ರೆ ಮೂಲಗಳು ಹೇಳಿವೆ.

ಕೇಂದ್ರ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ (ಡಿಆರ್‌ಡಿಒ) ವಿಜ್ಞಾನಿಯಾಗಿ 22 ವರ್ಷ ಕಾರ್ಯನಿರ್ವಹಿಸಿದ್ದ ಅವರು ನಂತರ ಸ್ವಯಂ ನಿವೃತ್ತಿ ಪಡೆದು ಜೈನ್ ವಿಶ್ವವಿದ್ಯಾಲಯದಲ್ಲಿ ಏರೋಸ್ಪೇಸ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾಗಿ ಕೆಲಸ ಮಾಡಿದ್ದರು.

ವಿಜ್ಞಾನದ ವಿಷಯಗಳನ್ನು ಸರಳವಾಗಿ ಬರೆಯುವ ಕಲೆ ಅವರಿಗೆ ಸಿದ್ಧಿಸಿತ್ತು. ಹಲವು ಪತ್ರಿಕೆಗಳಲ್ಲಿ ಅಂಕಣಕಾರರಾಗಿಯೂ ಚಿರಪರಿಚಿತರಾಗಿದ್ದರು.

ಕನ್ನಡ ಪುಸ್ತಕ ಪ್ರಾಧಿಕಾರದ ಡಾ. ಅನುಪಮಾ ನಿರಂಜನ ವೈದ್ಯಕೀಯ ಮತ್ತು ವಿಜ್ಞಾನ ಸಾಹಿತ್ಯ ಪ್ರಶಸ್ತಿಯನ್ನು ಶುಕ್ರವಾರ (ಜುಲೈ 2) ಘೋಷಿಸಲಾಗಿತ್ತು. ಆದರೆ, ಪ್ರಶಸ್ತಿ ಘೋಷಿಸಿದ ದಿನವೇ ಅವರು ನಿಧನರಾಗಿದ್ದಾರೆ.

No comments:

Post a Comment