Thursday, 8 July 2021

ಗುಡ್ ನ್ಯೂಸ್ : ಶಿಕ್ಷಕರು, ಉಪನ್ಯಾಸಕರ ನೇಮಕಾತಿಗೆ ರಾಜ್ಯ ಸರ್ಕಾರ ಅನುಮೋದನೆ.

 


ಬೆಂಗಳೂರು : ರಾಜ್ಯ ಸರ್ಕಾರವು ಶಿಕ್ಷಕರು, ಉಪನ್ಯಾಸಕರ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ನಿವೃತ್ತಿ, ಮರಣ, ರಾಜೀನಾಮೆ ಮತ್ತಿತರ ಕಾರಣಗಳಿಂದ 2015 ರ ಡಿಸೆಂಬರ್ 31 ರೊಳಗೆ ಖಾಲಿಯಾದ 430 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.

257 ಶಿಕ್ಷಕರು, 173 ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು 2021-22 ನೇ ಶೈಕ್ಷಣಿಕ ವರ್ಷ ಪ್ರಾರಂಭಗೊಂಡ ನಂತರ ಪ್ರಕ್ರಿಯ ಪ್ರಾರಂಭಿಸಲು ಆರ್ಥಿಕ ಇಲಾಖೆ ಸಮ್ಮತಿ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ನೇಮಕಾತಿ ಮಾಡಿಕೊಳ್ಳಲು ಸರ್ಕಾರ ಅನುಮೋದಿಸಿದೆ ಎಂದು ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ವಿ.ಶ್ರೀನಿವಾಸಮೂರ್ತಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಇನ್ನು ಕರ್ನಾಟಕದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿಯಿರುವ 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳು ಮತ್ತು 310 ಪ್ರಾಂಶುಪಾಲರ ಹುದ್ದೆಗಳು ಭರ್ತಿ ಮಾಡಲು ಈಗಾಗಲೇ ರಾಜ್ಯ ಸರ್ಕಾರ ಅನುಮತಿ ನೀಡಿದ್ದು, ಶೀಘ್ರದಲ್ಲೇ ನೇಮಕಾತಿಗೆ ಅಧಿಸೂಚನೆ ಹೊರಡಿಸುವುದಾಗಿ ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್ ಅಶ್ವತ್ಥನಾರಾಯಣ್ ತಿಳಿಸಿದ್ದರು. ಸದ್ಯ ಮೂಲಗಳ ಪ್ರಕಾರ, ಇದೇ ತಿಂಗಳು 3ನೇ ವಾರದೊಳಗೆ ನೇಮಕಾತಿಯ ಅಧಿಸೂಚನೆ ಹೊರಡಿಸಲಾಗುವುದು.


No comments:

Post a Comment

Featured post

148 ವರ್ಷಗಳ ನಂತರ, 10 ಜೂನ್ 2021 ರ ಮೊದಲ ಸೂರ್ಯಗ್ರಹಣ!!,

ಸಮಗ್ರ ಸುದ್ದಿ ಸ್ಪೇಷಲ್ : ಅಪರೂಪದ ಖಗೋಳ ವಿದ್ಯಾಮಾನದ ಕುರಿತಾಗಿ ವಿಶೇಷ ಲೇಖನ, ನವೀನ್.ಪಿ.ಆಚಾರ್ , ಸಹ ಕಾರ್ಯದರ್ಶಿ , ಚಿತ್ರದುರ್ಗ ವಿಜ್ಞಾನ ಕೇಂದ್ರ.  ಗ್ರಹಣ ಎಂದಾಕ...