ಬೆಂಗಳೂರು. ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಿರುವುದರಿಂದ
ಪುನರಾವರ್ತಿತ ವಿದ್ಯಾರ್ಥಿಗಳನ್ನು ಕೂಡ ಪರೀಕ್ಷೆ ಇಲ್ಲದೆ ಪಾಸ್ ಮಾಡಲು ಪದವಿಪೂರ್ವ ಶಿಕ್ಷಣ
ಇಲಾಖೆ ನಿರ್ಧರಿಸಿದೆ ಎಂದು ಹೇಳಲಾಗಿದೆ.
ಫ್ರೆಷರ್ ಗಳನ್ನು ಮಾತ್ರ ಪಾಸ್ ಮಾಡಿ ಪುನರಾವರ್ತಿತ
ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಸರ್ಕಾರ ನಿರ್ಧರಿಸಿದ್ದು, ಇದನ್ನು ಪ್ರಶ್ನಿಸಿ ಕೆಲವರು ಕೋರ್ಟ್ ಮೊರೆ ಹೋಗಿದ್ದರು.
ಕೋರ್ಟ್ ಈ ಬಗ್ಗೆ ಪರಿಶೀಲನೆ ನಡೆಸಲು ಸೂಚನೆ ನೀಡಿದ್ದು, ತಜ್ಞರ ಸಮಿತಿ
ಪುನರಾವರ್ತಿತ ವಿದ್ಯಾರ್ಥಿಗಳನ್ನು ಕೂಡ ಪಾಸು ಮಾಡುವಂತೆ ಶಿಫಾರಸು ಮಾಡಿದೆ. ಅಂತೆಯೇ, ಪುನರಾವರ್ತಿತ ವಿದ್ಯಾರ್ಥಿಗಳನ್ನು ಕೂಡ ಪರೀಕ್ಷೆ ಇಲ್ಲದೆ ಪಾಸ್ ಮಾಡಲು ಚಿಂತನೆ
ನಡೆದಿದ್ದು, ಶೀಘ್ರವೇ ಸರ್ಕಾರದಿಂದ ತೀರ್ಮಾನಿಸಲಾಗುವುದು. ಖಾಸಗಿ
ಅಭ್ಯರ್ಥಿಗಳಿಗೆ ಪರೀಕ್ಷೆ ನಡೆಸಲಾಗುವುದು ಎನ್ನಲಾಗಿದೆ.
No comments:
Post a Comment