Ø ಕೋವಿಡ್19 ಕಾರಣದಿಂದಾಗಿ ಸ್ಥಗಿತಗೊಂಡಿದ್ದ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯನ್ನು ಶೀಘ್ರವಾಗಿ ನಡೆಸುವಂತೆ ಒತ್ತಾಯಿಸಿ ಶುಕ್ರವಾರ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ ಅವರಿಗೆ ಮನವಿಪತ್ರ ಸಲ್ಲಿಸಲಾಯಿತು.
Ø ಕನ್ನಡ
ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸ್ಥಾನದ ಸ್ಪರ್ಥಿ ಕೆ.ಎಂ.ಶಿವಸ್ವಾಮಿ. ಕನ್ನಡ ಸಾಹಿತ್ಯ
ಪರಿಷತ್ ಚುನಾವಣೆ ನಡೆಸಲು ಒತ್ತಾಯ
ಚಿತ್ರದುರ್ಗ : ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ
ಪರಿಷತ್ತಿನ ಚುನಾವಣೆಯನ್ನು ಶೀಘ್ರವಾಗಿ ನಡೆಸಬೇಕೆಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ
ಸ್ಥಾನದ ಅಭ್ಯರ್ಥಿ ಕೆ.ಎಂ.ಶಿವಸ್ವಾಮಿ ಒತ್ತಾಯಿಸಿದ್ದಾರೆ.
ಶುಕ್ರವಾರ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಿ ಅವರು
ಮಾತನಾಡಿದರು.
ಕರ್ನಾಟಕ ಸರ್ಕಾರವು ಕಳೆದ ವರ್ಷ ಡಿಸೆಂಬರ್ 30ರಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ, ಎಲ್ಲ
ಜಿಲ್ಲೆಗಳ ಜಿಲ್ಲಾಧ್ಯಕ್ಷ ಹಾಗೂ ಗಡಿನಾಡು ಘಟಕಗಳ ಅಧ್ಯಕ್ಷ ಸ್ಥಾನದ ಚುನಾವಣೆ ನಡೆಸಲು ಅಧಿಸೂಚನೆ
ಹೊರಡಿಸಿತ್ತು. ಈ ಸಂಬಂಧ ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಚುನಾವಣಾಧಿಕಾರಿಗಳು 2021ರ ಮೇ.9ರಂದು ಚುನಾವಣೆ ಜರುಗಿಸಲು ಎಲ್ಲ ಪ್ರಕ್ರಿಯೆಯು
ಆರಂಭಿಸಿದ್ದರು. ಅದರಂತೆ ಕೇಂದ್ರ ಅಧ್ಯಕ್ಷ ಸ್ಥಾನ, ಎಲ್ಲ ಜಿಲ್ಲೆಗಳ ಜಿಲ್ಲಾಧ್ಯಕ್ಷ ಹಾಗೂ
ಗಡಿನಾಡು ಅಧ್ಯಕ್ಷ ಸ್ಥಾನಗಳಿಗೂ ರಾಜ್ಯಾದ್ಯಂತ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳು ಚುನಾವಣಾ
ಪ್ರಚಾರ ಕಾರ್ಯ ಕೈಗೊಂಡಿದ್ದರು. ಆದರೆ ದಿಢೀರನೆ ಕೋವಿಡ್-19 ಸೋಂಕು
ಹರಡುವ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ಚುನಾವಣೆಯ ಪ್ರಕ್ರಿಯೆಯನ್ನು ತಾತ್ಕಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಇನ್ನು ಕೆಲವೇ
ದಿನಗಳಲ್ಲಿ ಆದರೆ ಮತದಾನ ಸೇರಿದಂತೆ ಇಡೀ
ಚುನಾವಣೆ ಪ್ರಕ್ರಿಯೆಯನ್ನು ಯಥಾಪ್ರಕಾರ ಮುಂದೂಡಲಾಗಿತ್ತು. ಇದೀಗ ರಾಜ್ಯದ ಎಲ್ಲೆಡೆ
ಕೋರೊನಾ ಸಕ್ರೀಯ ಪ್ರಕರಣಗಳ ಸಂಖ್ಯೆ ಬಹುಪಾಲು
ಇಳಿಮುಖವಾಗಿದ್ದು, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಲಾಕ್ ಡೌನ್
ನಿಯಮಗಳನ್ನು ಸಹ ಸಡಿಲಗೊಳಿಸಲಾಗಿದೆ.
ಈಗಾಗಲೇ ರಾಜ್ಯ ಚುನಾವಣಾ ಆಯೋಗವು
ರಾಜ್ಯದಲ್ಲಿ ಬಾಕಿ ಇರುವ ಸ್ಥಳಿಯ ಸಂಸ್ಥೆಗಳು, ಜಿಲ್ಲಾಪಂಚಾಯಿತಿ, ತಾಲ್ಲೂಕು ಪಂಚಾಯಿತಿಗಳ ಚುನಾವಣೆ ನಡೆಸಲು
ಪರಿಷೃತ ಮತದಾರರ ಪಟ್ಟಿ ಪ್ರಕಟಣೆ, ಮೀಸಲಾತಿ ಪಟ್ಟಿಯನ್ನು
ರಾಜ್ಯಪತ್ರದಲ್ಲಿ ಪ್ರಕಟಿಸುವ ಮೂಲಕ ರಾಜ್ಯದಲ್ಲಿ ಚುನಾವಣಾ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.
ಅದರಂತೆ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಯಲ್ಲಿ 80% ಜನಸಂಧಣಿ ಸೇರದ ಹಿನ್ನೆಲೆಯಲ್ಲಿ ಶೀಘ್ರವಾಗಿ ಮತದಾನ ನಡೆಸಬೇಕು ಎಂದು ಒತ್ತಾಯಿಸಿದರು.
ಇದೇವೇಳೆ ರಂಗಕರ್ಮಿ ಕೆ.ಪಿ.ಎಂ.ಗಣೇಶಯ್ಯ, ಕೆ.ಎಂ.ಏಕಾಂತಮೂರ್ತಿ,
ಜಿ.ತಿಪ್ಪೇಸ್ವಾಮಿ, ಕಾಂತರಾಜ್ ಇದ್ದರು.
No comments:
Post a Comment