ಬೆಂಗಳೂರು : ರಾಜ್ಯದಲ್ಲಿ ಪ್ರತಿ ಬುಧವಾರ ವಿಶೇಷ ಲಸಿಕಾ ಉತ್ಸವ ( Special Corona Vaccine Utsav ) ನಡೆಸಲಾಗುತ್ತದೆ. ಈ ಮೂಲಕ 10 ಲಕ್ಷ ಕೊರೋನಾ ಲಸಿಕೆಯನ್ನು ( Corona Vaccine ) ನೀಡುವ ಗುರಿಯನ್ನು ಹೊಂದಲಾಗಿದೆ ಎಂಬುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದರು. ಇದರಂತೆಯೇ ನಾಳೆ ರಾಜ್ಯಾದ್ಯಂತ ವಿಶೇಷ ಲಸಿಕಾ ಉತ್ಸವ ನಡೆಯಲಿದೆ. ಇಂತಹ ಲಸಿಕಾ ಉತ್ಸವದಲ್ಲಿ 2 ನೇ ಡೋಸ್ ಪಡೆದವರಿಗೆ , 18 ವರ್ಷ ಮೇಲ್ಪಟ್ಟವರಿಗೂ ಮೊದಲ ಡೋಸ್ ಕೋವಿಶೀಲ್ಡ್ , ಕೋವ್ಯಾಕ್ಸಿನ್ ಲಸಿಕೆ ( Covishield and Covaxin ) ಲಭ್ಯವಾಗಲಿದೆ. ಹೌದು.. ಇನ್ನು ಮುಂದೆ ಪ್ರತಿ ಬುಧವಾರ ವಿಶೇಷ ಲಸಿಕಾ ಉತ್ಸವ ನಡೆಸಿ ಸುಮಾರು 10 ಲಕ್ಷ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದರು. ಆಗಸ್ಟ್ ತಿಂಗಳಲ್ಲೇ 1.10 ಕೋಟಿ ಲಸಿಕೆ ಕೇಂದ್ರ ಸರ್ಕಾರದಿಂದ ಬಂದಿದೆ. ನಾನು ಮತ್ತು ಮುಖ್ಯಮಂತ್ರಿಗಳು ಕೇಂದ್ರದ ಮಟ್ಟದಲ್ಲಿ ಚರ್ಚಿಸಿದ ಬಳಿಕ ಸಮರ್ಪಕವಾಗಿ ಪೂರೈಕೆಯಾಗುತ್ತಿದೆ. ಇನ್ನು ಮುಂದೆ ಪ್ರತಿ ದಿನ 5 ಲಕ್ಷ ಲಸಿಕೆ ನೀಡಲಾಗುವುದು. ವಾರದಲ್ಲಿ ಒಂದು ದಿನ ಬುಧವಾರ ಲಸಿಕಾ ಉತ್ಸವ ನಡೆಸಿ ಈ ಪ್ರಮಾಣವನ್ನು 5 ದಿಂದ 10 ಲಕ್ಷಕ್ಕೆ ಹೆಚ್ಚಿಸಲಾಗುವುದು. ಇದರಿಂದ ಒಂದೂವರೆಯಿಂದ ಎರಡು ಕೋಟಿ ಲಸಿಕೆಯನ್ನು ಒಂದು ತಿಂಗಳಲ್ಲಿ ನೀಡಬಹುದು. ಇಡೀ ದೇಶದಲ್ಲಿ ಲಸಿಕೆ ಕಾರ್ಯ ಪೂ...