Thursday, 26 August 2021

ನಾಲ್ಕು ಜಿಲ್ಲೆಗಳಲ್ಲಿ 0 ಕೇಸ್, ರಾಜ್ಯದಲ್ಲಿ ಇಂದು 1,213 ಜನರಿಗೆ ಕೊರೋನಾ : ಸೋಂಕಿಗೆ 25 ಜನರು ಬಲಿ.

 

ಬೆಂಗಳೂರು : ರಾಜ್ಯದಲ್ಲಿ ಇಂದು ನಾಲ್ಕು ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಯಲ್ಲಿ ಹೊಸದಾಗಿ 1,213 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಅಲ್ಲದೇ ಸೋಂಕಿನಿಂದ 25 ಜನರು ಸಾವನ್ನಪ್ಪಿದ್ದಾರೆ.

ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ವಿಜಯಪುರ, ಯಾದಗಿರಿ, ರಾಯಚೂರು ಮತ್ತು ಬೀದರ್ ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣಗಳು ವರದಿಯಾಗಿವೆ. ಬೆಂಗಳೂರು ನಗರದಲ್ಲಿ 319, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 269, ಹಾಸನ 90, ಮೈಸೂರು 98, ಉಡುಪಿ 113 ಸೇರಿದಂತೆ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1213 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿರೋದಾಗಿ ತಿಳಿಸಿದೆ.

ಇನ್ನೂ ಬೆಂಗಳೂರು ಗ್ರಾಮಾಂತರ ಮತ್ತು ನಗರ ಜಿಲ್ಲೆಯಲ್ಲಿ ತಲಾ ಇಬ್ಬರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10, ಮೈಸೂರಿನಲ್ಲಿ ಮೂವರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ 25 ಸೋಂಕಿತರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಸಾವಿನ ಸಂಖ್ಯೆ 37,231ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.



No comments:

Post a Comment

Featured post

148 ವರ್ಷಗಳ ನಂತರ, 10 ಜೂನ್ 2021 ರ ಮೊದಲ ಸೂರ್ಯಗ್ರಹಣ!!,

ಸಮಗ್ರ ಸುದ್ದಿ ಸ್ಪೇಷಲ್ : ಅಪರೂಪದ ಖಗೋಳ ವಿದ್ಯಾಮಾನದ ಕುರಿತಾಗಿ ವಿಶೇಷ ಲೇಖನ, ನವೀನ್.ಪಿ.ಆಚಾರ್ , ಸಹ ಕಾರ್ಯದರ್ಶಿ , ಚಿತ್ರದುರ್ಗ ವಿಜ್ಞಾನ ಕೇಂದ್ರ.  ಗ್ರಹಣ ಎಂದಾಕ...