Saturday, 28 August 2021

20 ದಿನದಲ್ಲಿ ಸಿಇಟಿ ರಿಸಲ್ಟ್: ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ

ಬೆಂಗಳೂರು,ಆ.28- ರಾಜ್ಯಾದ್ಯಂತ ಇಂದಿನಿಂದ ಆರಂಭವಾಗಿರುವ ಸಿಇಟಿ ಪರೀಕ್ಷೆಯ ಫಲಿತಾಂಶ ಇನ್ನು 20 ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ಶೇಷಾದ್ರಿಪುರಂ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ.30ಕ್ಕೆ ಸಿಟಿ ಪರೀಕ್ಷೆ ಮುಗಿಯುತ್ತದೆ. ಹೀಗಾಗಿ ಕ್ಷಿಪ್ರಗತಿಯಲ್ಲಿ ಫಲಿತಾಂಶ ನೀಡಲು ಕ್ರಮ ವಹಿಸಲಾಗಿದೆ. ತದನಂತರ ಅಕ್ಟೋಬರ್ ನಲ್ಲಿ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ನಡೆಸಲಾಗುವುದು ಎಂದರು.

ರಾಜ್ಯದ 530 ಕೇಂದ್ರ ಸೇರಿ ಬೆಂಗಳೂರಿನ 86 ಕೇಂದ್ರಗಳಲ್ಲೂ ಪರೀಕ್ಷೆ ಉತ್ತಮವಾಗಿ ನಡೆಯುತ್ತಿದೆ. ಎಲ್ಲೂ ಯಾವುದೇ ಸಮಸ್ಯೆ ಇಲ್ಲ. ಕೋವಿಡ್ ನಿಯಮಗಳಿಗೊಳಪಟ್ಟೇ ಪರೀಕ್ಷೆ ನಡೆಸಲಾಗಿದೆ. ಪರೀಕ್ಷೆಗೆ 2,01,816 ವಿದ್ಯಾರ್ಥಿಗಳ ನೋಂದಣಿ ಮಾಡಿಕೊಂಡಿದ್ದು, ಈ ಪೈಕಿ ಕೋವಿಡ್ ಪಾಸಿಟಿವ್ ಇರುವ 12 ವಿದ್ಯಾರ್ಥಿಗಳ ಪೈಕಿ 4 ವಿದ್ಯಾರ್ಥಿಗಳಿಗೆ ನೆಗೆಟಿವ್ ವರದಿ ಬಂದಿದೆ. ಪಾಸಿಟಿವ್ ಇರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಿ ಪರೀಕ್ಷೆ ಬರೆಸಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ಕೇಂದ್ರಗಳಿಂದ ಮಾಹಿತಿ ಬಂದಿದ್ದು, ಎಲ್ಲೂ ಯಾವುದೇ ಸಮಸ್ಯೆ ಆಗಿಲ್ಲ. ಕೇರಳದ ಗಡಿ ಜಿಲ್ಲೆಗಳಲ್ಲಿ ಲಾಕ್‍ಡೌನ್ ಮತ್ತು ವೀಕೆಂಡ್ ಕಫ್ರ್ಯೂ ಇದ್ದರೂ ಆ ಜಿಲ್ಲೆಗಳಲ್ಲೂ ತೊಂದರೆ ಉಂಟಾಗಿಲ್ಲ. ಮುಖ್ಯವಾಗಿ ಮಂಗಳೂರು, ಉಡುಪಿ, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಪರೀಕ್ಷೆ ಸುಸೂತ್ರವಾಗಿ ಸಾಗಿದೆ ಎಂದು ಅವರು ಮಾಹಿತಿ ನೀಡಿದರು

No comments:

Post a Comment

Featured post

148 ವರ್ಷಗಳ ನಂತರ, 10 ಜೂನ್ 2021 ರ ಮೊದಲ ಸೂರ್ಯಗ್ರಹಣ!!,

ಸಮಗ್ರ ಸುದ್ದಿ ಸ್ಪೇಷಲ್ : ಅಪರೂಪದ ಖಗೋಳ ವಿದ್ಯಾಮಾನದ ಕುರಿತಾಗಿ ವಿಶೇಷ ಲೇಖನ, ನವೀನ್.ಪಿ.ಆಚಾರ್ , ಸಹ ಕಾರ್ಯದರ್ಶಿ , ಚಿತ್ರದುರ್ಗ ವಿಜ್ಞಾನ ಕೇಂದ್ರ.  ಗ್ರಹಣ ಎಂದಾಕ...