Friday, 27 August 2021

ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 386 ಸೇರಿ ಇಂದು 1,301 ಪ್ರಕರಣ ಪತ್ತೆ, 17 ಮಂದಿ ಸಾವು!

 

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಇಳಿಕೆಯಾಗಿದೆ. ಇಂದು 1,301 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,44,764ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 17 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,248ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.

ಬೆಂಗಳೂರಿನಲ್ಲಿ ಇಂದು 386 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,36,615ಕ್ಕೆ ಏರಿಕೆಯಾಗಿದೆ. ಇನ್ನು 2 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇಂದು 1,614 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,88,520ಕ್ಕೆ ಏರಿಕೆಯಾಗಿದೆ. ಇನ್ನು 18,970 ಸಕ್ರೀಯ ಪ್ರಕರಣಗಳಿವೆ.

ರಾಜ್ಯಾದ್ಯಂತ ಇಂದು 1,86,900 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 1,301 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.69ಕ್ಕೆ ಇಳಿದಿದೆ.

ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.69ಕ್ಕೆ ಇಳಿದಿದೆ.

No comments:

Post a Comment

Featured post

148 ವರ್ಷಗಳ ನಂತರ, 10 ಜೂನ್ 2021 ರ ಮೊದಲ ಸೂರ್ಯಗ್ರಹಣ!!,

ಸಮಗ್ರ ಸುದ್ದಿ ಸ್ಪೇಷಲ್ : ಅಪರೂಪದ ಖಗೋಳ ವಿದ್ಯಾಮಾನದ ಕುರಿತಾಗಿ ವಿಶೇಷ ಲೇಖನ, ನವೀನ್.ಪಿ.ಆಚಾರ್ , ಸಹ ಕಾರ್ಯದರ್ಶಿ , ಚಿತ್ರದುರ್ಗ ವಿಜ್ಞಾನ ಕೇಂದ್ರ.  ಗ್ರಹಣ ಎಂದಾಕ...