Sunday 22 August 2021

5 ಜಿಲ್ಲೆ ಹೊರತುಪಡಿಸಿ ರಾಜ್ಯದಲ್ಲಿ ನಾಳೆಯಿಂದ ಶಾಲಾ, ಕಾಲೇಜು ಆರಂಭ -ಇಲ್ಲಿದೆ ಮಾಹಿತಿ.

ಬೆಂಗಳೂರು: ರಾಜ್ಯದಲ್ಲಿ ಆಗಸ್ಟ್ 23 ಸೋಮವಾರದಿಂದ 9 ರಿಂದ 12 ನೇ ತರಗತಿಗಳಲ್ಲಿ ಭೌತಿಕ ಪಾಠ ಪ್ರಾರಂಭವಾಗಲಿದೆ. ಇದಕ್ಕಾಗಿ ಶಾಲಾ-ಕಾಲೇಜುಗಳಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಪಾಸಿಟಿವಿಟಿ ದರ ಶೇಕಡ 2 ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ 9 ಮತ್ತು 10 ನೇ ತರಗತಿ ಹಾಗೂ ಪ್ರಥಮ, ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸಲು ಸರ್ಕಾರ ಮುಂದಾಗಿದೆ.

9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬೆಳಗಿನ ವೇಳೆ ಅರ್ಧ ದಿನ ಮಾತ್ರ ಭೌತಿಕ ತರಗತಿ ನಡೆಯಲಿವೆ.

ಸೋಮವಾರದಿಂದ ಶುಕ್ರವಾರದವರೆಗೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30 ರವರೆಗೆ, ಶನಿವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12.50 ರವರೆಗೆ ತರಗತಿಗಳು ನಡೆಯಲಿವೆ.

ವಿದ್ಯಾರ್ಥಿಗಳು ಮತ್ತು ಕೊಠಡಿಯ ಲಭ್ಯತೆ ನೋಡಿಕೊಂಡು 15 ರಿಂದ 20 ಜನರ ತಂಡ ಮಾಡಿ ಭೌತಿಕ ತರಗತಿ ನಡೆಸಲು ತಿಳಿಸಲಾಗಿದೆ.

ಪಿಯುಸಿ ವಿದ್ಯಾರ್ಥಿಗಳಿಗೆ ಮೂರು ದಿನ ಆಫ್ಲೈನ್ ಕ್ಲಾಸ್ ಗಳು ಮತ್ತು ಮೂರು ದಿನ ಆನ್ಲೈನ್ ಕ್ಲಾಸ್ ಗಳು ನಡೆಯಲಿವೆ. ಶೇಕಡ 50 ರಷ್ಟು ವಿದ್ಯಾರ್ಥಿಗಳು ಸೋಮವಾರ, ಮಂಗಳವಾರ, ಬುಧವಾರ ತರಗತಿಗೆ ಹಾಜರಾಗಬೇಕಿದೆ. ಉಳಿದ ವಿದ್ಯಾರ್ಥಿಗಳು ಗುರುವಾರ, ಶುಕ್ರವಾರ, ಶನಿವಾರ ಕಾಲೇಜಿಗೆ ಬರಬೇಕಿದ್ದು, ಉಳಿದ ಮೂರು ದಿನ ಆನ್ಲೈನ್ ತರಗತಿ ನಡೆಯಲಿವೆ

ಪಾಸಿಟಿವಿಟಿ ದರ ಶೇಕಡ 2 ಕ್ಕಿಂತ ಹೆಚ್ಚಾಗಿರುವ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಸದ್ಯಕ್ಕೆ ಶಾಲೆ ಆರಂಭಿಸುವುದಿಲ್ಲ ಎನ್ನಲಾಗಿದೆ.

 

No comments:

Post a Comment