Tuesday, 24 August 2021

ಸಿಎಂ ಆನಂದ್ ಸಿಂಗ್ : ಇಂದೇ ಸಚಿವ ಸ್ಥಾನಕ್ಕೆ ರಾಜೀನಾಮೆ?

 

ಬೆಂಗಳೂರು : ಖಾತೆ ವಿಚಾರಕ್ಕೆ ಮುನಿಸಿಕೊಂಡಿರುವ ಸಚಿವ ಆನಂದ್ ಸಿಂಗ್ ಇಂದು ಅಥವಾ ನಾಳೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ.

ಇಂದು ಸಚಿವ ಆನಂದ್ ಸಿಂಗ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದು, ತೀವ್ರ ಕುತೂಹಲ ಮೂಡಿಸಿದೆ. ಇಂದೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ.

ಆನಂದ್ ಸಿಂಗ್ ಅವರು ತಮಗೆ ನೀಡಿರುವ ಪರಿಸರ ಹಾಗೂ ಪ್ರವಾಸೋದ್ಯಮ ಖಾತೆ ಬದಲಾಗಿ ಪ್ರಬಲ ಖಾತೆ ನೀಡುವಂತೆ ಪಟ್ಟು ಹಿಡಿದಿರುವ ಆನಂದ್ ಸಿಂಗ್ ಖಾತೆ ಬದಲಾವಣೆ ಮಾಡದಿದ್ದರೆ ರಾಜೀನಾಮೆ ನೀಡುವುದಾಗಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಸಂದೇಶ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.

ಖಾತೆ ಬದಲಾವಣೆ ಮಾಡುವಂತೆ ಪಟ್ಟು ಹಿಡಿದಿರುವ ಆನಂದ್ ಸಿಂಗ್ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

No comments:

Post a Comment

Featured post

148 ವರ್ಷಗಳ ನಂತರ, 10 ಜೂನ್ 2021 ರ ಮೊದಲ ಸೂರ್ಯಗ್ರಹಣ!!,

ಸಮಗ್ರ ಸುದ್ದಿ ಸ್ಪೇಷಲ್ : ಅಪರೂಪದ ಖಗೋಳ ವಿದ್ಯಾಮಾನದ ಕುರಿತಾಗಿ ವಿಶೇಷ ಲೇಖನ, ನವೀನ್.ಪಿ.ಆಚಾರ್ , ಸಹ ಕಾರ್ಯದರ್ಶಿ , ಚಿತ್ರದುರ್ಗ ವಿಜ್ಞಾನ ಕೇಂದ್ರ.  ಗ್ರಹಣ ಎಂದಾಕ...