Monday, 23 August 2021

ಚಿತ್ರೀಕರಣದ ವೇಳೆ ಅವಘಡ ಅಭಿಷೇಕ್ ಬಚ್ಚನ್ ಗೆ ಗಾಯ, ಆಸ್ಪತ್ರೆಗೆ ದಾಖಲು.

 


ಮುಂಬೈ : ತಮಿಳು ರಿಮೇಕ್ ಹಿಂದಿ ಚಿತ್ರವೊಂದರ ಶೂಟಿಂಗ್ ಸಂದರ್ಭದಲ್ಲಿ, ನಾಯಕನ ಪಾತ್ರದಲ್ಲಿ ನಟಿಸುತ್ತಿದ್ದಂತ ಬಿಗ್ ಬಿ ಪುತ್ರ ಅಭಿಶೇಷ್ ಬಚ್ಚನ್ ಅವರು ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇಂದು ತಮಿಳಿನ ಓಟು ಸೇರಪ್ಪು ಸೈಜ್ 7 ಸಿನಿಮಾವನ್ನು ಹಿಂದಿಗೆ ರಿಮೇಕ್ ಮಾಡಲಾಗುತ್ತಿತ್ತು. ಈ ಚಿತ್ರದಲ್ಲಿ ನಾಯಕ ಪಾತ್ರದಲ್ಲಿ ಅಭಿಷೇಕ್ ಬಚ್ಚನ್ ಕಾಣಿಸಿಕೊಂಡಿದ್ದರು. ಇಂತಹ ಚಿತ್ರೀಕರಣದ ಸಂದರ್ಭದಲ್ಲಿ ಅಭಿಷೇಕ್ ಬಲಗೈ ಹಾಗೂ ಬೆರಳುಗಳಿಗೆ ಗಾಯಗೊಂಡಿರೋದಾಗಿ ತಿಳಿದು ಬಂದಿದೆ.

ಶೂಟಿಂಗ್ ಸಂದರ್ಭದಲ್ಲಿ ಗಾಯಗೊಂಡ ಕಾರಣ, ಅವರನ್ನು ಕೂಡಲೇ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗಿದೆ. ಗಾಯಕ್ಕೆ ಚಿಕಿತ್ಸೆ ನೀಡಿರುವಂತ ವೈದ್ಯರು, ಯಾವುದೇ ಸಮಸ್ಯೆ ಇಲ್ಲ ಎಂಬುದಾಗಿ ತಿಳಿಸಿದ್ದಾರೆ

No comments:

Post a Comment

Featured post

148 ವರ್ಷಗಳ ನಂತರ, 10 ಜೂನ್ 2021 ರ ಮೊದಲ ಸೂರ್ಯಗ್ರಹಣ!!,

ಸಮಗ್ರ ಸುದ್ದಿ ಸ್ಪೇಷಲ್ : ಅಪರೂಪದ ಖಗೋಳ ವಿದ್ಯಾಮಾನದ ಕುರಿತಾಗಿ ವಿಶೇಷ ಲೇಖನ, ನವೀನ್.ಪಿ.ಆಚಾರ್ , ಸಹ ಕಾರ್ಯದರ್ಶಿ , ಚಿತ್ರದುರ್ಗ ವಿಜ್ಞಾನ ಕೇಂದ್ರ.  ಗ್ರಹಣ ಎಂದಾಕ...