Sunday 22 August 2021

ನಾಳೆಯಿಂದ ರಾಜ್ಯದಲ್ಲಿ ಶಾಲೆ ಆರಂಭ : ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ.

 

ಬೆಂಗಳೂರು : ರಾಜ್ಯದಲ್ಲಿ ಆಗಸ್ಟ್ 23 ರಿಂದ ಅಂದರೆ ನಾಳೆಯಿಂದ 9 ರಿಂದ 12 ನೇ ತರಗತಿಗಳು ಆರಂಭವಾಗುತ್ತಿದ್ದು, ಈಗಾಗಲೇ ಈಗಾಗಲೇ 9 ರಿಂದ 12ನೇ ತರಗತಿಗಳನ್ನು ತೆರೆಯೋದಕ್ಕೆ ಶಿಕ್ಷಣ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಆಗಸ್ಟ್ 23 ರಿಂದ 9 ರಿಂದ 12 ನೇ ತರಗತಿಗಳಿಗೆ ಶಾಲೆ ಆರಂಭ ಮಾಡಲು ಸಿದ್ಧತೆ ನಡೆದಿದೆ. ಹಂತ ಹಂತವಾಗಿ ಶಾಲೆ ಆರಂಭಕ್ಕೆ ಶಿಕ್ಷಣ ಇಲಾಖೆ ಮುಂದಾಗಿದ್ದು, ಡೇಂಜರ್ ಝೋನ್ ಜಿಲ್ಲೆಗಳನ್ನು ಹೊರತುಪಡಿಸಿ ಬೇರೆಡೆ ಶಾಲೆ ತೆರೆಯಲಾಗುತ್ತದೆ. ಶೇ.2 ಕ್ಕಿಂತ ಹೆಚ್ಚು ಪಾಸಿಟಿವಿಟಿ ಪ್ರಮಾಣ ಇರುವ ಜಿಲ್ಲೆಗಳಾದ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಉಡುಪಿ, ಹಾಸನ ಹೊರತುಪಡಿಸಿ ಉಳಿದ ಕಡೆ 9 ರಿಂದ 12 ನೇ ತರಗತಿಗಳಿಗೆ ಮೊದಲ ಹಂತದಲ್ಲಿ ಶಾಲೆ ಶುರುವಾಗಲಿದೆ.

ಶಾಲೆ ಆರಂಭಕ್ಕೆ ಶಿಕ್ಷಣ ಇಲಾಖೆಯ ಮಾರ್ಗಸೂಚಿ ಪ್ರಮುಖ ನಿಯಮಗಳು ಹೀಗಿವೆ :

1.     ಶಾಲೆಯಲ್ಲಿ ಎರಡಕ್ಕಿಂತ ಹೆಚ್ಚು ವಿದ್ಯಾರ್ಥಿಗಳಲ್ಲಿ ಸೋಂಕು ಕಂಡು ಬಂದರೆ ಒಂದು ವಾರ ಶಾಲೆ ಸೀಲ್​ಡೌನ್

2.    ಶೇ. 2ಕ್ಕಿಂತ ಹೆಚ್ಚು ಪಾಸಿಟಿವಿಟಿ ಪ್ರಮಾಣ ಇರುವ ಜಿಲ್ಲೆಗಳಲ್ಲಿ ಶಾಲೆ ತೆರೆಯುವಂತಿಲ್ಲ

3.    ಕೊರೊನಾ ಲಕ್ಷಣ ಕಂಡು ಬರುವ ಮಗುವನ್ನು ಶಾಲೆಗೆ ಕಳುಹಿಸುವಂತಿಲ್ಲ

4.   ಶಿಕ್ಷಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಮಾಸ್ಕ್ ಧರಿಸುವುದು ಕಡ್ಡಾಯ

5.    ಶಿಕ್ಷಕರು ಹಾಗೂ ಶಾಲಾ ಸಿಬ್ಬಂದಿ ಕಡ್ಡಾಯವಾಗಿ ಕೊರೊನಾ ಲಸಿಕೆ ಪಡೆದಿರಬೇಕು

6.    ವಿದ್ಯಾರ್ಥಿಗಳು ತಮ್ಮ ಪೋಷಕರಿಂದ ಒಪ್ಪಿಗೆ ಪತ್ರ ಪಡೆದು ಶಾಲೆಗೆ ಬರಬೇಕು

7.    ವಸತಿ ಶಾಲೆ ಹಾಗೂ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ 72 ಗಂಟೆಗಳ ಅಂತರದಲ್ಲಿ ಪಡೆದ ಕೊವಿಡ್ ನೆಗೆಟಿವ್ ವರದಿ ಸಲ್ಲಿಸಬೇಕು

8.    ಶಾಲೆ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯ ಇಲ್ಲ

9.    ಆನ್ ಲೈನ್ ಹಾಗೂ ಆಫ್ ಲೈನ್ ಎರಡಕ್ಕೂ ಅವಕಾಶ ಸಾಧ್ಯತೆ

10.  ಕೊಠಡಿಯಲ್ಲಿ 20 ವಿದ್ಯಾರ್ಥಿಗಳಿಗೆ ಮಾತ್ರ ಕಲಿಕೆಗೆ ಅವಕಾಶ

ಸಾಮಾನ್ಯ ನಿಯಂತ್ರಣ ಕ್ರಮಗಳು

·         ವಿದ್ಯಾರ್ಥಿಗಳು ತರಗತಿ ಮತ್ತು ಕಾಲೇಜು ಆವರಣದಲ್ಲಿ ಗುಂಪುಗೂಡಬಾರದು

·         ಕನಿಷ್ಠ 6 ಅಡಿಗಳ ಭೌತಿಕ ಅಂತರದ ನಿಯಮವನ್ನು ಪಾಲಿಸುವುದು.

·         ಮುಖ ಕವಚ, ಮಾಸ್ಕ್ ಗಳನ್ನು ಕಡ್ಡಾಯವಾಗಿ ಬಳಕೆ ಮಾಡುವುದು.

·         ಪದೇ ಪದೇ ಕೈಗಳನ್ನು ಸೋಪಿನಿಂದ ತೊಳೆಯುವುದು.

·         ಕೆಮ್ಮುವಾಗ, ಸೀನುವಾಗ ಕಡ್ಡಾಯವಾಗಿ ಮುಖಕ್ಕೆ ಕರವಸ್ತ್ರ, ಟಿಶ್ಯು ಪೇಪರ್ ಬಳಸಬೇಕು.

·         ಎಲ್ಲೆಂದರಲ್ಲಿ ಉಗುಳುವುದನ್ನು ಕಡ್ಡಾಯವಾಗಿ ನಿಷೇಧಿಸುವುದು.

No comments:

Post a Comment