Wednesday, 25 August 2021

ಮೈಸೂರಿನಲ್ಲಿ ಬಿಜೆಪಿಗೆ ಒಲಿದ ಮೇಯರ್ ಹುದ್ದೆ - ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹರ್ಷ.

 

ಬೆಂಗಳೂರು : ಮೈಸೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಬಿಜೆಪಿಯ ಸುನಂದಾ ಫಾಲನೇತ್ರ ಅವರು ಆಯ್ಕೆಯಾಗಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹರ್ಷ ವ್ಯಕ್ತಪಡಿಸಿದರು.

ಬಹಳ ವರ್ಷದ ನಂತರ ಬಿಜೆಪಿಯವರು ಮೇಯರ್ ಆಗಿದ್ದಾರೆ. ಇದಕ್ಕೆ ಎಲ್ಲ ಪಾಲಿಕೆ ಸದಸ್ಯರಿಗೆ ಹಾಗೂ ಮೈಸೂರಿನ ಜನತೆಗೆ ಧನ್ಯವಾದಗಳು. ಇದಕ್ಕಾಗಿ ಶ್ರಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್, ಸಚಿವ ಅಶೋಕ್, ಶಾಸಕರಾದ ನಾಗೇಂದ್ರ, ರಾಮದಾಸ್ , ಪಕ್ಷದ ಕಾರ್ಯಕರ್ತರು, ಅಧ್ಯಕ್ಷರೂ ಎಲ್ಲರಿಗೂ ಅಭಿನಂದನೆಗಳು ತಿಳಿಸಿದರು.

ದೆಹಲಿ ಪ್ರವಾಸ: ದೆಹಲಿಗೆ ಇಂದು ತೆರಳಿದ ಮುಖ್ಯಮಂತ್ರಿಗಳು ಸಂಜೆ ಕೇಂದ್ರ ಕೃಷಿ ಸಚಿವರು ಹಾಗೂ ಜಲಶಕ್ತಿ ಸಚಿವರನ್ನು ಭೇಟಿಯಾಲಿದ್ದಾರೆ. ನಾಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಹಾಗೂ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಲಿದ್ದೇನೆ. ಸಂಜೆ ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಲು ಸಮಯ ಕೋರಿರುವುದಾಗಿ ತಿಳಿಸಿದರು.

No comments:

Post a Comment

Featured post

148 ವರ್ಷಗಳ ನಂತರ, 10 ಜೂನ್ 2021 ರ ಮೊದಲ ಸೂರ್ಯಗ್ರಹಣ!!,

ಸಮಗ್ರ ಸುದ್ದಿ ಸ್ಪೇಷಲ್ : ಅಪರೂಪದ ಖಗೋಳ ವಿದ್ಯಾಮಾನದ ಕುರಿತಾಗಿ ವಿಶೇಷ ಲೇಖನ, ನವೀನ್.ಪಿ.ಆಚಾರ್ , ಸಹ ಕಾರ್ಯದರ್ಶಿ , ಚಿತ್ರದುರ್ಗ ವಿಜ್ಞಾನ ಕೇಂದ್ರ.  ಗ್ರಹಣ ಎಂದಾಕ...