ದೇಶದಲ್ಲಿ ಲಸಿಕೆ ಪಡೆಯಲು ಅರ್ಹರಿರುವವರಲ್ಲಿ ಅರ್ಧಕ್ಕೂ ಹೆಚ್ಚು ಪ್ರಮಾಣದ
ಜನರು ಈಗಾಗಲೇ ಕನಿಷ್ಟ 1 ಡೋಸ್ ಲಸಿಕೆ ಸ್ವೀಕರಿಸಿದ್ದಾರೆ ಎಂದು
ಸರ್ಕಾರದ ಮಾಹಿತಿಯಲ್ಲಿ ತಿಳಿದುಬಂದಿದೆ.
ಆರೋಗ್ಯ ಕಾರ್ಯಕರ್ತರಲ್ಲಿ 99
ಪ್ರತಿಶತ ಹಾಗೂ ಮುಂಚೂಣಿ ಕಾರ್ಯಕರ್ತರಲ್ಲಿ 100 ಪ್ರತಿಶತ
ಮಂದಿ ಕೊರೊನಾ ಲಸಿಕೆ ಪಡೆದಿದ್ದಾರೆ ಎನ್ನಲಾಗಿದೆ.
60 ವರ್ಷ ಮೇಲ್ಪಟ್ಟವರಲ್ಲಿ 60 ಪ್ರತಿಶತಕ್ಕೂ ಅಧಿಕ ಮಂದಿ ಮೊದಲ ಡೋಸ್ ಕೊರೊನಾ ಲಸಿಕೆಯನ್ನು ಸ್ವೀಕರಿಸಿದ್ದಾರೆ.
ದೇಶದಲ್ಲಿ 47.3
ಕೋಟಿ ಜನತೆಗೆ ಮೊದಲ ಡೋಸ್ ಲಸಿಕೆಯನ್ನು ಸ್ವೀಕರಿಸಿದ್ದರೆ, 13.8
ಕೋಟಿ ಜನತೆ 2 ಡೋಸ್ ಲಸಿಕೆಗಳನ್ನು ಸ್ವೀಕರಿಸಿದ್ದಾರೆ. ಕೊರೊನಾ 3ನೇ ಅಲೆಯನ್ನು ನಿಯಂತ್ರಿಸುವ ಸಲುವಾಗಿ ದೇಶದಲ್ಲಿ ಲಸಿಕೆ ಅಭಿಯಾನವನ್ನು ಇನ್ನಷ್ಟು
ಚುರುಕುಗೊಳಿಸಲಾಗಿದೆ.
ಇನ್ನು ಈ ವಿಚಾರವಾಗಿ ಟ್ವೀಟ್ ಮಾಡಿರುವ ಕೇಂದ್ರ ಆರೋಗ್ಯ ಸಚಿವ
ಮನ್ಕುಶ್ ಮಾಂಡವಿಯಾ, ಭಾರತವು ಅಭೂತಪೂರ್ವ ಯಶಸ್ಸನ್ನು
ಸಾಧಿಸಿದೆ..! ಕೊರನಾ ಲಸಿಕೆ ಪಡೆಯುವ ಅರ್ಹರಲ್ಲಿ 50 ಪ್ರತಿಶತ ಮಂದಿ
ಮೊದಲ ಡೋಸ್ ಸ್ವೀಕರಿಸಿದ್ದಾರೆ ಎಂದು ಬರೆದಿದ್ದಾರೆ.
ಈ ವರ್ಷದ ಅಂತ್ಯದಲ್ಲಿ 100
ಪ್ರತಿಶತ ಲಸಿಕೆಯನ್ನು ನೀಡುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ. ಕಳೆದ
ಕೆಲ ವಾರಗಳಿಂದ ದೇಶದ ಯಾವುದೇ ರಾಜ್ಯಗಳಲ್ಲಿ ಕೊರೊನಾ ಲಸಿಕೆಯ ಅಭಾವ ಕಂಡುಬಂದಿಲ್ಲ ಎಂದು ಕೇಂದ್ರ
ಮಾಹಿತಿ ನೀಡಿದೆ.
No comments:
Post a Comment