Monday 16 August 2021

ಶಾಲಾರಂಭಕ್ಕೆ ಸಿದ್ಧವಾಯಿತು: ಹೊಸ ಗೈಡ್ ಲೈನ್.

 

ಬೆಂಗಳೂರು: ಆಗಸ್ಟ್ 23ರಿಂದ ಶಾಲೆಗಳು ಆರಂಭವಾಗುತ್ತಿದ್ದು, ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.


ಆಗಸ್ಟ್ 23ರಿಂದ 9 ಹಾಗೂ 10ನೇ ತರಗತಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳು ಆರಂಭವಾಗಲಿದ್ದು ಅರ್ಧ ದಿನ ಮಾತ್ರ ತರಗತಿಗಳು ನಡೆಯಲಿವೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಗೈಡ್ ಲೈನ್ ಪ್ರಮುಖಾಂಶಗಳು:

v ಸೋಮವಾರದಿಂದ ಶುಕ್ರವಾರದವರೆಗೆ ಬೆಳಿಗ್ಗೆ 10-1:30 ಗಂಟೆ.ಯವರೆಗೆ ತರಗತಿಗಳು ನಡೆಯಲಿವೆ

v ಶನಿವಾರ ಬೆಳಿಗ್ಗೆ 10ರಿಂದ 12:30ವರೆಗೆ ತರಗತಿಗಳು

v ಶಾಲೆಗೆ ಬರಲು ಪೋಷಕರ ಅನುಮತಿ ಪತ್ರ ಕಡ್ಡಾಯ

v ಮಕ್ಕಳಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ

v ವಿದ್ಯಾರ್ಥಿಗಳು ಮನೆಯಿಂದಲೇ ಊಟ/ಉಪಹಾರ ತರಬೇಕು

v ವಿದ್ಯಾರ್ಥಿಗಳಿಗೆ ಮಾಸ್ಕ್ ಕಡ್ದಾಯ.

v ಶಾಲೆಗಳಲ್ಲಿ ವಿದ್ಯಾರ್ಥಿಗಳ ಭೌತಿಕ ಹಾಜರಾತಿ ಕಡ್ಡಾಯವಲ್ಲ, ಆನ್ ಲೈನ್ ಅಥವಾ ಪರ್ಯಾಯ ವಿಧಾನದಲ್ಲೂ ಹಾಜರಾಗಬಹುದು

v ಶಾಲೆಗಳಲ್ಲಿ ಶುದ್ಧ ಬಿಸಿ ನೀರಿನ ವ್ಯವಸ್ಥೆ

v ಶಿಕ್ಷಕರು 15-20 ಸಂಖ್ಯೆಯ ವಿದ್ಯಾರ್ಥಿಗಳ ತಂಡಗಳನ್ನಾಗಿ ಮಾಡಿ ಭೌತಿಕ ತರಗತಿ ನಡೆಸಬೇಕು






No comments:

Post a Comment